ಕಂಪ್ಲಿ

ಜೆಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಜೆಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಲೋಕದರ್ಶನ ವರದಿ 

ಕಂಪ್ಲಿ, ಜು.11: ಕಾಂಗ್ರೆಸ್ ಹೈಕಮಾಂಡ್, ವರಿಷ್ಠರು ಹಾಗೂ ನೂತನ ಮುಖ್ಯಮಂತ್ರಿ ಅವರು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಮಸಾಗರ ಗಂಗಾಪರಮೇಶ್ವರಿ ಸೇವಾ ಸಮಿತಿ ಟ್ರಸ್ಟ್‌ ಅಧ್ಯಕ್ಷ ಬಿ. ಮಂಜುನಾಥ್ ಆಗ್ರಹಿಸಿದರು.  

ರಾಮಸಾಗರ ಗ್ರಾಮದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಗಂಗಾಮತ (ಬೆಸ್ತ) ಸಮುದಾಯದ ಜನಸಂಖ್ಯೆ ಇದ್ದು, ಈ ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ ಎಂದು ಹೇಳಿದರು.  

ಸಮುದಾಯದ ಅಭಿವೃದ್ಧಿ ಹಾಗೂ ರಾಜಕೀಯ ಪ್ರತಿನಿಧಿತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಗಂಗಾಮತ ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಜೆಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.  ಈ ಸಂದರ್ಭದಲ್ಲಿ ಗಂಗಾಮತ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ