ಧಾರವಾಡ - ಹುಬ್ಬಳ್ಳಿ

ಎಸ್‌ಐಆರ್ ಸ್ಥಗಿತಕ್ಕೆ ಆಗ್ರಹ: ಧಾರವಾಡದಲ್ಲಿ ಎಡಪಕ್ಷಗಳ ಪ್ರತಿಭಟನೆ

ಎಸ್‌ಐಆರ್ ಸ್ಥಗಿತಕ್ಕೆ ಆಗ್ರಹ: ಧಾರವಾಡದಲ್ಲಿ ಎಡಪಕ್ಷಗಳ ಪ್ರತಿಭಟನೆ


ಧಾರವಾಡ .25: ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸಿಪಿಐ(ಎಂ), ಎಸ್ಯುಸಿಐ(ಕಮ್ಯುನಿಸ್ಟ್‌), ಸಿಪಿಐ ಪಕ್ಷಗಳ ವತಿಯಿಂದ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.  

ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಬೇಕು, ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು, ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದವರ ಮತದಾನದ ಹಕ್ಕುಗಳನ್ನು ಮರುಸ್ಥಾಪಿಸಬೇಕು ಹಾಗೂ ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.  

ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಹೇಶ್ ಪತ್ತಾರ, ಎಸ್ಯುಸಿಐ(ಕಮ್ಯುನಿಸ್ಟ್‌) ನ ಗಂಗಾಧರ ಬಡಿಗೇರ್, ಸಿಪಿಐ ಜಿಲ್ಲಾ ಮುಖಂಡ ಬಶೀರ್ ಮುಧೋಳ, ಸಾಮಾಜಿಕ ಹೋರಾಟಗಾರರಾದ ಡಾ. ರಾಜೇಂದ್ರ ಪೊದ್ದಾರ, ಬಸವರಾಜ ಸೊಳಿಬಾವಿ ಸೇರಿದಂತೆ ವಿವಿಧ ಎಡಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.  

ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು, ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಬೇಕು, ತಪ್ಪಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾದ ಎಲ್ಲರ ಮತದಾನದ ಹಕ್ಕುಗಳನ್ನು ಮರುಸ್ಥಾಪಿಸಬೇಕು ಹಾಗೂ ಚುನಾವಣಾ ಆಯೋಗದ ಸ್ವತಂತ್ರ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 


ಸುದ್ದಿ ಓದಿ