ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಗೆ ಸೇರೆ್ಡಗೊಳಿಸಲು ಒತ್ತಾಯ
Demand to include Vijayapura district under 371(J) reservation
ವಿಜಯಪುರ, ಆ.25: ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯ ವ್ಯಾಪ್ತಿಗೆ ಸೇರೆ್ಡಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ಕಲ್ಲಯ್ಯ ಸಾಲಿಮಠ, ಹೈದರಾಬಾದ್ ಕರ್ನಾಟಕ ಪ್ರದೇಶದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಕೈಬಿಟ್ಟಿರುವುದು ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ. ಜಿಲ್ಲೆಯನ್ನು ಕೂಡಲೇ 371(ಜೆ) ಮೀಸಲಾತಿಯ ವ್ಯಾಪ್ತಿಗೆ ಸೇರಿಸಲು ಜಿಲ್ಲೆಯ ಶಾಸಕರು, ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ವಿಜಯಪುರ ಜಿಲ್ಲೆ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ನ್ಯಾಯಾಂಗ ವ್ಯವಸ್ಥೆ, ಪುರಾತತ್ವ ಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯ, ನೀರಾವರಿ, ಕೃಷ್ಣಾ ಕಾಡಾ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ವ್ಯಾಪ್ತಿಯಲ್ಲಿ ಕಲಬುರಗಿ ವಿಭಾಗದೊಂದಿಗೆ ಆಡಳಿತಾತ್ಮಕ ಹಾಗೂ ಐತಿಹಾಸಿಕ ನಂಟು ಹೊಂದಿದೆ. ನಂಜುಂಡಪ್ಪ ವರದಿಯಲ್ಲಿಯೂ ವಿಜಯಪುರ ಜಿಲ್ಲೆಯನ್ನು ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಗುರುತಿಸಲಾಗಿದೆ. ಹೀಗಾಗಿ ಜಿಲ್ಲೆಗೆ 371(ಜೆ) ಅಡಿಯಲ್ಲಿ ಮೀಸಲಾತಿ ಹಾಗೂ ವಿಶೇಷ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮುಖಂಡ ಶಿವಪ್ಪ ಶಿರಹಟ್ಟಿ ಮಾತನಾಡಿ, 371(ಜೆ) ಮೀಸಲಾತಿ ಇಲ್ಲದ ಕಾರಣ ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಅನ್ಯಾಯವಾಗುತ್ತಿದೆ. ಕೃಷಿ ಕಾರ್ಮಿಕರು, ಅಂಗವಿಕಲರು, ಮಹಿಳೆಯರು, ಉದ್ಯಮಿಗಳು ಸೇರಿದಂತೆ ಎಲ್ಲ ವರ್ಗದ ಜನರು ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕೂಡಲೇ ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಗೆ ಸೇರೆ್ಡಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿನೋದ ಖೇಡ, ಗಣಿಮುಲ್ಲಾ ಯಾಕೂಬ್, ಮಕಾನದಾರ ಶಂಕರ ಪೂಜಾರಿ, ಸಂತೋಷ ತೇಲಿ, ಶಬ್ಬೀರ್ ಬಾಬಾನಗರ ಸೇರಿದಂತೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಪದಾಧಿಕಾರಿಗಳು ಹಾಗೂ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 