ಮುದ್ದೆಬಿಹಾಲ್

ಹೊಸ ಪಡಿತರ ಚೀಟಿ ಅರ್ಜಿ ಸ್ವೀಕರಿಸಲು ಆಗ್ರಹ

ಹೊಸ ಪಡಿತರ ಚೀಟಿ ಅರ್ಜಿ ಸ್ವೀಕರಿಸಲು ಆಗ್ರಹ

ಮುದ್ದೇಬಿಹಾಳ  ನವೆಂಬರ್ 07: ಹೊಸದಾಗಿ ಪಡಿತರ ಚೀಟಿ ಪಡೆದುಕೊಳ್ಳಲು ಆನ್​ಲೈನ್ ಅರ್ಜಿ ಸಲ್ಲಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಹಸೀಲ್ದಾರ್​ ಜಿ.ಎಸ್.ಮಳಗಿ ಅವರಿಗೆ ಮನವಿ ಸಲ್ಲಿಸಿದರು. ಕಳೆದ ಹಲವುತಿಂಗಳಿಂದ ಪಡಿತರ ಚೀಟಿಗೆ ಹೊಸದಾಗಿ ಸಲ್ಲಿಕೆಯಾಗುವ ಆನ್​ಲೈನ್ ಅರ್ಜಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಪರದಾಡುವಂತಾಗಿದೆ. ಹೀಗಾಗಿ ಹೊಸದಾಗಿ ಪಡಿತರ ಚೀಟಿ ಪಡೆದುಕೊಳ್ಳಲು ಆನ್​ಲೈನ್ ಅರ್ಜಿ ಸಲ್ಲಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.    

ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಆನ್​ಲೈನ್ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡುವಂತೆ ಮನವಿಪಟ್ಟಣದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್​ ಜಿ.ಎಸ್.ಮಳಗಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಸುಮಾರು ಎಂಟು ತಿಂಗಳಿಂದ ಪಡಿತರ ಚೀಟಿ ಆನ್​ಲೈನ್ ಅರ್ಜಿ ಸ್ಥಗಿತಗೊಂಡಿದೆ. ಇದರಿಂದ ಬಡಜನತೆ ಪರದಾಡುವಂತಾಗಿದೆ. ಈ ಸಮಸ್ಯೆಯ ಬಗ್ಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ಷೇತ್ರದ ಬಡವರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಿ ಸಾರ್ವಜನಿಕರಿಗೆ ಹೊಸದಾಗಿ ಪಡಿತರ ಚೀಟಿ ಪಡೆದುಕೊಳ್ಳಲು ಆನ್​ಲೈನ್ ಅರ್ಜಿ ಸಲ್ಲಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಸರ್ಕಾರದ ಈ ನಿರ್ಧಾರ ಸಾವಿರಾರು ಬಡ ಕುಟುಂಬದವರಿಗೆ ಮತ್ತು ಗುಳೆ ಹೋಗಿ ಜೀವನ ನಡೆಸುತ್ತಿರುವ ಕಡುಬಡವರಿಗೆ ಕಂಟಕವಾಗಿದೆ. ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಅನಾನುಕೂಲವಾಗಿದ್ದು, ತಮ್ಮ ಕುಟುಂಬದ ಹೊಸ ಪಡಿತರ ಚೀಟಿ ಅರ್ಜಿ ತೆಗೆದುಕೊಳ್ಳಿ ಎಂದರೆ ತಹಶೀಲ್ದಾರ್​, ವಿನಾಕಾರಣ ಕಾಲ ದೂಡುತ್ತಿದ್ದಾರೆ ಎಂದು ಹೇಳಿದರು

ಸುದ್ದಿ ಓದಿ