ಬಕ್ರೀದ್ ಹಿನ್ನೆಲೆ ಅಕ್ರಮ ಗೋ ಸಾಗಾಟ ತಡೆಗೆ ಆಗ್ರಹ
Demand to stop illegal cow trafficking on the eve of Bakrid
ಬಳ್ಳಾರಿ 27: ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ನಗರ ಅಧ್ಯಕ್ಷ ಅಶೋಕ್ ಚೌಹ್ವಾನ್ ಆಗ್ರಹಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸೋಮವಾರ ತಹಶಿಲ್ದಾರರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಜಾರಿಯಲ್ಲಿದ್ದರೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.ಹಿಂದೂ ಸಂಪ್ರದಾಯದಲ್ಲಿ ಗೋವನ್ನು ಪೂಜ್ಯನೀಯವಾಗಿ ಕಾಣಲಾಗುತ್ತಿದ್ದು, ಗೋಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ. ಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಪ್ರಮುಖ ಸ್ಥಳಗಳಲ್ಲಿ ಪರೀಶೀಲನಾ ತಂಡಗಳನ್ನು ನೇಮಿಸಿ, ಚೆಕ್ಪೋಸ್ಟ್ಗಳನ್ನು ಸ್ಥಾಪಿಸಬೇಕು. ಮೇ 29ರವರೆಗೆ ಗೋ ಮಾರಾಟ ಹಾಗೂ ಜಾನುವಾರು ಸಂತೆಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕು.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಗೋರಕ್ಷಕರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಂಯೋಜಕ ವಿನೋದ್ ಬಾಗಡೆ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹಕಾರ್ಯದರ್ಶಿ ಶಂಕರ್, ಕವಿತಾ, ಸುಗುಣಾ,ದೀಪಾ, ಹೇಮಂತ್, ಅರುಣ್,ಹುಲಗಣ್ಣ,ವಿಷ್ಣು, ಅಶೋಕ, ಅನಂತ, ಸಂಕೇತ, ಜ್ಯೋತಿ ಹಾಜರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 