ಹೆಚ್ಚುವರಿ ಸಾಗಾಣಿಕೆ ವೆಚ್ಚ ವಸೂಲಿ ತಡೆಗೆ ಆಗ್ರಹ

ಹೆಚ್ಚುವರಿ ಸಾಗಾಣಿಕೆ ವೆಚ್ಚ ವಸೂಲಿ ತಡೆಗೆ ಆಗ್ರಹ  Demand to stop recovery of additional transportation costs


ಬೆಳಗಾವಿ 16: ಕಬ್ಬು ಉತ್ಪಾದನಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಬ್ಬಿನ ಎಫ್‌ಆರ​‍್ಿ ದರವನ್ನು ಕನಿಷ್ಠ 4,500ಕ್ಕೆ ಹೆಚ್ಚಿಸಬೇಕು. ರಾಜ್ಯ ಸರ್ಕಾರವು ಎಸ್‌ಎಪಿ ದರವಾಗಿ ಪ್ರತಿ ಟನ್ಗೆ ಹೆಚ್ಚುವರಿ 800 ನಗದಾಗಿ ನಿಗದಿಪಡಿಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದರು.  

ನಗರದ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 29 ಸಕ್ಕರೆ ಕಾರ್ಖಾನೆಗಳ ಪೈಕಿ ಹಲವು ಕಾರ್ಖಾನೆಗಳು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ರೈತರಿಂದ ಹೆಚ್ಚಾಗಿ ವಸೂಲಿ ಮಾಡುತ್ತಿವೆ. ಇದರಿಂದ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದರು.  

ಪ್ರಸ್ತುತ ಪ್ರತಿ ಟನ್ ಕಬ್ಬಿಗೆ ಕಟಾವು ವೆಚ್ಚ 512 ಹಾಗೂ ಸಾಗಾಣಿಕೆ ವೆಚ್ಚ 279 ನಿಗದಿಪಡಿಸಲಾಗಿದೆ. ಆದರೆ ಕೆಲವು ಕಾರ್ಖಾನೆಗಳು ಇದಕ್ಕಿಂತ ಹೆಚ್ಚಿನ ವೆಚ್ಚ ವಸೂಲಿ ಮಾಡುತ್ತಿವೆ. ಎಫ್‌ಆರ​‍್ಿ ದರದಲ್ಲಿ ಹೆಚ್ಚುವರಿ ವೆಚ್ಚ ಕಡಿತಗೊಳಿಸಿ, ಸಕ್ಕರೆ ನಿಯಂತ್ರಣ ಕಾಯ್ದೆಯಂತೆ 14 ದಿನಗಳೊಳಗೆ ರೈತರಿಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಅಸಮರ​‍್ಕ ವಿದ್ಯುತ್ ಪೂರೈಕೆಯಿಂದ ಕೃಷಿ ಪಂಪ್ಸೆಟ್ಗಳಿಗೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು.  ಕಬ್ಬಿನಿಂದ ಎಥನಾಲ್ ಉತ್ಪಾದನೆ ಹೆಚ್ಚಿಸುವ ಕುರಿತು ಸೆ.28 ಮತ್ತು 29ರಂದು ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರೀಯ ರೈತ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ ಕಬ್ಬು ಬೆಳೆಗಾರರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಣ್ಣ ಪ್ರಮಾಣದಲ್ಲಿ ರೈತರಿಗೆ ಎಥನಾಲ್ ಉತ್ಪಾದನೆಗೆ ಅವಕಾಶ ಕಲ್ಪಿಸುವಂತೆ ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದರು.  

ರಾಜ್ಯ ಉಪಾಧ್ಯಕ್ಷ ಸುರೇಶ್ ಎಂ. ಪಾಟೀಲ, ಗುರುಸಿದ್ದಪ್ಪ ಕೋಟಗಿ, ರಮೇಶ್ ಹಿರೇಮಠ, ಶಿವಾನಂದ ಮೇಟಿ, ಮಹಾಂತೇಶ ವಕೀಲರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಬೆಳಗಾಂಕರ ಸೇರಿದಂತೆ ವಿವಿಧ ಜಿಲ್ಲೆಗಳ ರೈತ ಮುಖಂಡರು ಉಪಸ್ಥಿತರಿದ್ದರು.