ಹಗರಿಬೊಮ್ಮನಹಳ್ಳಿ

ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಮೊಟ್ಟೆ ವಿತರಣೆ ಮುಂದುವರೆಸುವಂತೆ ಆಗ್ರಹ

ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಮೊಟ್ಟೆ ವಿತರಣೆ ಮುಂದುವರೆಸುವಂತೆ ಆಗ್ರಹ

ಲೋಕದರ್ಶನ ವರದಿ 

ಹಗರಿಬೊಮ್ಮನಹಳ್ಳಿ 18 : ಕಲ್ಯಾಣ ಕರ್ನಾಟಕ ಭಾಗದ ಶಾಲಾ ಮಕ್ಕಳು ಅಪೌಷ್ಠಿಕತೆ ನಿವಾರಣೆಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಣೆ ಕಾರ್ಯ ಮುಂದುವರೆಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಶನಿವಾರ ಮನವಿ ಸಲ್ಲಿಸಿದರು. 

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಸಂಚಾಲಕರಾದ ಬಿ.ಮಾಳಮ್ಮ ಮಾತನಾಡಿ, ರಾಜ್ಯ ಸರ್ಕಾರ ಅನುಷ್ಠಾನ ಗೊಳಿಸಿರುವ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಶಾಲಾ ಮಕ್ಕಳಿಗೆ ಮೊಟ್ಟೆ ಹಾಗೂ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಡಿಸೆಂಬರ್ ಮೊದಲವಾರದಿಂದಲೇ ಆರಂಭವಾಗಿದ್ದು, ಇದನ್ನು ಸ್ವಾಗತಿಸುತ್ತೇವೆ. ಆದರೆ, ಇದು ಪ್ರಯೋಗಿಕವಾಗಿ ಎಂದು ಹೇಳಿದರುವುದನ್ನು ನಾವು ವಿರೋಧಿಸುತ್ತೇವೆ. ಈ ಯೋಜನೆಯನ್ನು ಮುಂದುವರೆಸಿ, ವಾರಪೂರ್ತಿ ಮೊಟ್ಟೆಗಳನ್ನು ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. 

ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್‌.ಎಸ್‌.ಬಸವರಾಜ್ ಮಾತನಾಡಿ ಸರ್ಕಾರದ ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಪೌಷ್ಠಿಕತೆ ಪೂರೈಕೆಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ, ಮುಂದೆ ಹಾಜರಾತಿ ಸಂಖ್ಯೆಯು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮೊಟ್ಟೆ ವಿತರಣೆ ಕಾರ್ಯ ಮೊಟಕುಗೊಳಿಸದಂತೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು. 

ಈ ಸಂಧರ್ಭದಲ್ಲಿ ಸಿಐಟಿಯು ಕಾರ್ಯದರ್ಶಿ ಎಸ್‌.ಜಗನ್ನಾಥ್, ಜಿ.ಸರೋಜ, ಪಿ.ಚಾಂದ್‌ಬೀ, ಸರ್ದಾರ್ ಹುಲಿಗೆಮ್ಮ, ಎಚ್‌.ಅಬ್ದುಲ್ ಸಾಬ್ ಸೇರಿದಂತೆ  ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ, ಎಸ್‌ಎಫ್‌ಐ, ಅಖಿಲ ಜನವಾದಿ ಮಹಿಳಾ ಸಂಘಟನೆ, ರಾಜ್ಯ ಮಸಣ ಕಾರ್ಮಿಕರ ಸಂಘ, ಸೆಮಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್‌, ಭಾರತ ಪ್ರಜಾ ಸತ್ತಾತ್ಮಕ ಯುವಜನ ಫೆಟರೇಷನ್ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು. 


ಸುದ್ದಿ ಓದಿ