ಇಂಡಿ

ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯಿಸಿ ಮನವಿ

ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯಿಸಿ ಮನವಿ

ಇಂಡಿ: ತಾಲೂಕಿನಾದ್ಯಂತ ಗ್ರಾಮಗಳ ಕಿರಾಣಿ ಅಂಗಡಿ, ಬೀಡಾ ಅಂಗಡಿ ಸೇರಿದಂತೆ ಸಣ್ಣಪುಟ್ಟ ಹೋಟೆಲ್‌ಗಳಲ್ಲಿಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಕೂಡಲೆ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಒತ್ತಾಯಿಸಿ ಆಮ್‌ಆದ್ಮಿ ಪಕ್ಷದ ಕಾರ‌್ಯಕರ್ತರು ಶನಿವಾರ ಅಬಕಾರಿ ಉಪ ನೀರೀಕ್ಷಕಿ ಫರೀನಾ ವನಕ್ಯಾಳ ಅವರಿಗೆ ಮನವಿ ಸಲ್ಲಿಸಿದರು. 

ಆಮ್‌ಆದ್ಮಿ ಪಕ್ಷದ ಇಂಡಿ ತಾಲೂಕಾ ಮುಖಂಡ ಜಕ್ಕಪ್ಪ ಕುಂಬಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದರೂ ಅಬಕಾರಿ ಹಾಗೂ ಪೊಲೀಸ್ ಇಲಾಖೆಗಳು ಕಣ್ಮುಚ್ಚಿ ಕುಳಿದುಕೊಂಡಿವೆ.  ಗೊರನಾಳ ಗ್ರಾಮದಲ್ಲಿ 11 ಅಕ್ರಮ ಮದ್ಯ ಮಾರಾಟ ಮಳಿಗೆಗಳಿವೆ.  

ಈ ಕುರಿತು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಗ್ರಾಮದ ಹಲವರು ಸಾಕಷ್ಟು ಬಾರಿ ಮೌಖಿಕವಾಗಿ ಮನವಿ ಮಾಡಿದರೂ ಸಹ ಇದುವರೆಗೂ ಮಾರಾಟ ಸ್ಥಗಿತವಾಗಿಲ್ಲ. ಇಂದಿನಿಂದಲೇ ಅಕ್ರಮ ಮಧ್ಯ ಮಾರಾಟ ನಿಲ್ಲಿಸಬೇಕು. ಇಲ್ಲವಾದರೆ ಅಬಕಾರಿ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಈ ಸಂದರ್ಭದಲ್ಲಿ ರವಿ ಪೂಜಾರಿ, ಬಸವರಾಜ ತಳವಾರ, ರೇವಯ್ಯ ಹಿರೇಮಠ ಸೇರಿದಂತೆ ಇನ್ನಿತರರು ಇದ್ದರು. 


ಸುದ್ದಿ ಓದಿ