ಕಾಗವಾಡ

ಡೆಂಘೀ: ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಭೆ

ಡೆಂಘೀ: ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಭೆ

ಲೋಕದರ್ಶನ ವರದಿ 

ಕಾಗವಾಡ 29: ಕೃಷ್ಣಾ ನದಿ ತೀರದ ಉಗಾರ ಖುರ್ದ ಪಟ್ಟಣದಲ್ಲಿ ಡೆಂಘೀ ಜ್ವರಗಳ ಲಕ್ಷಣಗಳು ಕಂಡುಬರುತ್ತಿದ್ದು, ಎಲ್ಲ ಸಾರ್ವಜನಿಕರು ಮನೆ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಡೆಂಘೀ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೆ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಉಗಾರ ಪುರಸಭೆ ಮುಖ್ಯಾಧಿಕಾರಿ ಸುನೀಲ ಬಬಲಾದಿ ಅಹ್ವಾನಿಸಿದ್ದಾರೆ. 

ಶುಕ್ರವಾರ ರಂದು ಉಗಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡುವಂತೆ ಹೇಳಿಕೊಂಡರು. 

ಉಗಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಕಿರಣ ಪಾಟೀಲ ಇವರು ಎಲ್ಲ ಕಾರ್ಯಕರ್ತೆಯರಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿ, ಜ್ವರದ ಬಗ್ಗೆ ಲಕ್ಷಣಗಳು ಕಂಡುಬಂದರೆ ಕೂಡಲೆ ಸಂಪರ್ಕಿಸಿರಿಯೆಂದು ಅಹ್ವಾನಿಸಿದರು. 

ಆರೋಗ್ಯ ಇಲಾಖೆಯ ಅಧಿಕಾರಿ ಸುರೇಖಾ ಕಟ್ಟಿ, ಅಭಯ ಗಣೇಶವಾಡಿ, ಸುಜಾತಾ ಕಾಡಮಟ್ಟಿ, ಸೇರಿದಂತೆ ಅನೇಕರು ಇದ್ದರು. 


ಸುದ್ದಿ ಓದಿ