ಬ್ಯಾಂಕ್ ಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತ- ಹಣಕಾಸು ಸಚಿವರ ಭರವಸೆ
deposit
ನವದೆಹಲಿ, ಫೆ 1-ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತವಾಗಿರಲಿದ್ದು, ಇದರ ಮೇಲ್ವಿಚಾರಣೆಗೆ ಬಿಗಿಯಾದ ಕಾರ್ಯವ್ಯವಸ್ಥೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
‘ಎಲ್ಲ ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್ ಗಳ ವಾಣಿಜ್ಯ ವಹಿವಾಟು ಮತ್ತು ಅವುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಸೂಕ್ತ ಕಾರ್ಯ ವ್ಯವಸ್ಥೆ ಜಾರಿಯಲ್ಲಿದ್ದು, ಠೇವಣಿದಾರರ ಹಣ ಸಂಪೂರ್ಣವಾಗಿ ಸುರಕ್ಷಿತವಾಗಿದೆ.’ ಎಂದು ಶನಿವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಹೇಳಿದ್ದಾರೆ.
‘ತೆರಿಗೆದಾರರು ಯಾವುದೇ ರೀತಿಯ ಕಿರುಕುಳಕ್ಕೆ ಒಳಗಾಗದಿರುವಂತೆ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ.’ ಎಂದು ಸಚಿವರು ಪ್ರತಿಪಾದಿಸಿದ್ದಾರೆ.ಎಲ್‍ಐಸಿಯಲ್ಲಿ ಸ್ವಲ್ಪ ಭಾಗವನ್ನು ಐಪಿಒ ಮೂಲಕ ಮಾರಾಟ ಮಾಡಲಾಗುವುದು. ಎನ್‍ಬಿಎಫ್‍ಸಿ ಮತ್ತು ಗೃಹ ಹಣಕಾಸು ನಿಗಮಗಳ ನಗದು ಸಮಸ್ಯೆಗಳನ್ನು ನಿವಾರಿಸಲು ಕಾರ್ಯವ್ಯವಸ್ಥೆ ರೂಪಿಸಲಾಗುವುದು. ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮಕ್ಕೆ ಠೇವಣಿ ವಿಮಾ ರಕ್ಷಣೆಯನ್ನು ಸದ್ಯದ ಒಂದು ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಅನುಮತಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 