ಬಳ್ಳಾರಿ

ಅ.7ರಂದು ಬಳ್ಳಾರಿ, ವಿಜಯನಗರಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭೇಟಿ

ಅ.7ರಂದು ಬಳ್ಳಾರಿ, ವಿಜಯನಗರಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭೇಟಿ

ಲೋಕದರ್ಶನ ವರದಿ 


ಬಳ್ಳಾರಿ, ಅ.6: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಅ.7ರಂದು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಕುರಿತು ನೇರ ಪರೀಶೀಲನೆ ನಡೆಸಲಿದ್ದಾರೆ.  

ಅ.7ರಂದು ಬೆಳಿಗ್ಗೆ 10.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡುವ ಅವರು, ಬೆಳಿಗ್ಗೆ 11.15ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.  

ಮಧ್ಯಾಹ್ನ 12ರಿಂದ ಸಂಜೆ 5.30ರವರೆಗೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಬರಪೀಡಿತ ತಾಲೂಕುಗಳು ಮತ್ತು ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸ್ಥಳ ಪರೀಶೀಲನೆ ನಡೆಸಲಿದ್ದಾರೆ.  

ನಂತರ ವಿಜಯನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎರಡೂ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರೀಶೀಲನಾ ಸಭೆ ನಡೆಸಲಿದ್ದಾರೆ.  

ಅಂದು ರಾತ್ರಿ ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಲಿರುವ ಉಪಮುಖ್ಯಮಂತ್ರಿಗಳು, ಅ.8ರಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಕೊಪ್ಪಳ ಜಿಲ್ಲೆಗೆ ಪ್ರಯಾಣಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ. 


ಸುದ್ದಿ ಓದಿ