ಪರೀಕ್ಷೆ ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ
Deputy Commissioner C.N. Sridhar instructs that the examination be conducted smoothly and transparen
ಗದಗ, ಜು.31: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯು ಆಗಸ್ಟ್ 2ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜುಲೈ 30ರಂದು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ, ಕುಡಿಯುವ ನೀರು, ವಿದ್ಯುತ್, ಗಾಳಿ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ನಿಯಮಾನುಸಾರ ಮತ್ತು ಜಾಗರೂಕತೆಯಿಂದ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ನಿರ್ದೇಶಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಗೋಡೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದ್ದು, ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಪರೀಕ್ಷೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸಣಾಯ್ಕ ಮಾಹಿತಿ ನೀಡಿ, ಗದಗ ಜಿಲ್ಲೆಯಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು 3,575 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 