ಮುರಿನಕಟ್ಟೆಗೆ ಪರ್ಯಾಯ ಸೂಕ್ತ ಸ್ಥಳ ಗುರುತು : ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
Deputy Commissioner Lakshmi Priya identifies alternative suitable location for Murinakatte
ಕಾರವಾರ 03 : ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ವಾಹನ ಸಂಚಾರಕ್ಕೆ , ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದ ಹಾಗೆ ಅಮ್ಮನವರ ಹೊರೆಯನ್ನಿಡುವ (ಮುರಿನಕಟ್ಟೆ) ಸ್ಥಳಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸುವುದು ಅಗತ್ಯವೆಂದು ತಿಳಿದು, ಸುರಕ್ಷಿತ ಸ್ಥಳ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ . ಈ ಸಂಬಂಧ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಭಟ್ಕಳ ನಗರದ ಎಲ್ಲಾ ಸಮುದಾಯದ ಹಿರಿಯ ನಾಗರಿಕರು ಹಾಗೂ ಒಮ್ಮತದ ಅಭಿಪ್ರಾಯದೊಂದಿಗೆ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಲಾಗಿದೆ ಎಂದಿದ್ದಾರೆ. ಎಲ್ಲರ ಒಪ್ಪಿಗೆಯಂತೆ, ಹಾಲಿ ಅಮ್ಮನವರ ಹೊರೆಯನ್ನು ಇಡಲಾಗಿರುವ, ಅದೇ ರಸ್ತೆಯ ಮಿಡಿಯನ್ ಗಾಗಿ ಲಭ್ಯ ಇರುವ ಸ್ಥಳವನ್ನು ಪರ್ಯಾಯ ಸ್ಥಳವೆಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದಿಂದ ಹಾಗೂ ಸ್ಥಳೀಯ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಸ್ಥಳದಲ್ಲಿ ಮಿಡಿಯನ್ ಹಾಗೂ ರಸ್ತೆ ಕಾಮಗಾರಿ ಮುಖಂಡರೊಂದಿಗೆ ಜಿಲ್ಲಾಡಳಿತದಿಂದ ಜರುಗಿಸಿ ಸಮಾಲೋಚನೆ ಪ್ರಾರಂಭಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 