ಧಾರವಾಡ - ಹುಬ್ಬಳ್ಳಿ

ಜನಗಣತಿ ಕಾರ್ಯವನ್ನು ನಿಖರವಾಗಿ ಮತ್ತು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಸೂಚನೆ

ಜನಗಣತಿ ಕಾರ್ಯವನ್ನು ನಿಖರವಾಗಿ ಮತ್ತು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಸೂಚನೆ
Deputy Commissioner Snehal R. instructs that the census work be carried out accurately and responsi

           ಧಾರವಾಡ ನ.13: ಭಾರತ ಜನಗಣತಿ 2027ರ ಎರಡನೇ ಹಂತದ ಜನಸಂಖ್ಯಾ ಗಣತಿ ಕಾರ್ಯದ ಸಿದ್ಧತೆಯ ಅಂಗವಾಗಿ ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನವೆಂಬರ್ 12 ಮತ್ತು 13 ರಂದು ಜಿಲ್ಲಾ ಹಾಗೂ ಚಾರ್ಜ್‌ ಮಟ್ಟದ ಅಧಿಕಾರಿಗಳಿಗೆ ಎರಡು ದಿನಗಳ ಜನಗಣತಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. 

            ಕಾರ್ಯಾಗಾರದಲ್ಲಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಹಾಗೂ ಪ್ರಧಾನ ಜನಗಣತಿ ಅಧಿಕಾರಿ ಸ್ನೇಹಲ್ ಆರ್‌. ಅವರು ಜನಗಣತಿಯು ದೇಶದ ಅಭಿವೃದ್ಧಿ ಯೋಜನೆಗಳು ಹಾಗೂ ಭವಿಷ್ಯದ ಆಡಳಿತಾತ್ಮಕ ನಿರ್ಧಾರಗಳಿಗೆ ಅತ್ಯಂತ ಪ್ರಮುಖವಾದ ರಾಷ್ಟ್ರೀಯ ಕಾರ್ಯವಾಗಿದೆ. ಆದ್ದರಿಂದ ಜನಗಣತಿ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತರಬೇತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಶಿಸ್ತು ಮತ್ತು ಬದ್ಧತೆಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು. 

              ಜನಗಣತಿಯ ಮೂಲಕ ಸಂಗ್ರಹಿಸಲಾದ ಮಾಹಿತಿಯು ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ರೂಪುರೇಷೆ ಸಿದ್ಧಪಡಿಸಲು, ಶಿಕ್ಷಣ, ಆರೋಗ್ಯ, ವಸತಿ, ಕುಡಿಯುವ ನೀರು, ಮೂಲಸೌಕರ್ಯ ಹಾಗೂ ಇತರ ಸಾರ್ವಜನಿಕ ಸೌಲಭ್ಯಗಳ ಯೋಜನೆ ರೂಪಿಸಲು ಪ್ರಮುಖ ಆಧಾರವಾಗುತ್ತದೆ. ಹೀಗಾಗಿ ಪ್ರತಿಯೊಂದು ಕುಟುಂಬದ ಮಾಹಿತಿಯನ್ನು ಯಾವುದೇ ಲೋಪದೋಷಗಳಿಲ್ಲದೆ ನಿಖರವಾಗಿ ಸಂಗ್ರಹಿಸುವುದು ಅತ್ಯಗತ್ಯ ಎಂದು ತಿಳಿಸಿದರು. 


ಸುದ್ದಿ ಓದಿ