ಬೆಳಗಾವಿ

ಮಹರ್ಷಿ ವಾಲ್ಮೀಕಿ ಜಯಂತಿ, ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಮಹರ್ಷಿ ವಾಲ್ಮೀಕಿ ಜಯಂತಿ, ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಲೋಕದರ್ಶನ ವರದಿ 

ಬೆಳಗಾವಿ 06 : ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಅ.6) ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕ್ಟೊಬರ 26 ರಂದು ಜರುಗಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದ ದಿನದಂದು ಕೋಟೆ ಕೆರೆಯಿಂದ ಸಂಗೋಳ್ಳಿ ರಾಯಣ್ಣ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರದ ವರೆಗೆ ಭವ್ಯ ಮೆರವಣಿಗೆ ಆಯೋಜಿಸಲು ತೀರ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಕುಂಭ ಮೇಳ, ಜಾನಪದ ಕಲಾ ತಂಡಗಳೊಂದಿಗೆ ಶಿಸ್ತು ಬದ್ಧವಾಗಿ ಸಾಗುವಂತೆ ಕ್ರಮ ಜರುಗಿಸಲು ತಿಳಿಸಿದರು. ಕಾರ್ಯಕ್ರಮದ ಮುಖ್ಯ ವೇದಿಕೆಗೆ ಹಕ್ಕ-ಬುಕ್ಕರು ಎಂದು ನಾಮಕರಣ ಮಾಡಬೇಕು. 


ಸುದ್ದಿ ಓದಿ