ಎಲ್ಲ ಇಲಾಖೆಗಳಿಂದ ಸಮಗ್ರ ಹಾಗೂ ನಿಖರ ವರದಿ ಸಿದ್ಧಪಡಿಸಲು ಜಿಲ್ಲಾಧಿಕಾರಿ ಸೂಚನೆ
Deputy Commissioner instructs all departments to prepare comprehensive and accurate reports
ವಿಜಯನಗರ ಹೊಸಪೇಟೆ 04: ಜಿಲ್ಲೆಯ ಇಂದಿನ ನೈಜ ಸ್ಥಿತಿಗತಿಯನ್ನು ಬಿಂಬಿಸುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಭವಿಷ್ಯದ ಅಗತ್ಯತೆಗಳನ್ನು ಪೂರೈಸುವ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ರೂಪಿಸುವ ಕಾರ್ಯ ಪ್ರಗತಿಯಲ್ಲಿದ್ದು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ನಿಖರ ಅಂಕಿ-ಅಂಶಗಳೊಂದಿಗೆ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮೇಲ್ವಿಚಾರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ನೀಡುವ ದತ್ತಾಂಶ ರಸ್ತೆ, ಕಟ್ಟಡಗಳಂತಹ ಭೌತಿಕ ಅಭಿವೃದ್ಧಿಗೆ ಸೀಮಿತವಾಗದೇ ಜಿಲ್ಲೆಯ ಜನರ ನೈಜ ಜೀವನಮಟ್ಟ ಹೇಗಿದೆ ಎಂಬುದನ್ನು ತಿಳಿಸುವ ಉಪಯುಕ್ತ ವರದಿಯಾಗಿದೆ. ಜಿಲ್ಲೆಯ ಜನರ ಸರಾಸರಿ ಜೀವಿತಾವಧಿ, ತಾಯಿ-ಮಗು ಮರಣ ಪ್ರಮಾಣ, ಪೌಷ್ಟಿಕತೆಯ ಮಟ್ಟ ಮತ್ತು ಆರೋಗ್ಯ ಸೌಕರ್ಯಗಳ ಲಭ್ಯತೆ. ಸಾಕ್ಷರತಾ ಪ್ರಮಾಣ, ಶಾಲಾ ದಾಖಲಾತಿ, ಹೆಣ್ಣುಮಕ್ಕಳ ಶಿಕ್ಷಣದ ಸ್ಥಿತಿಗತಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುತ್ತದೆ.
ಆದ್ದರಿಂದ ಅಧಿಕಾರಿಗಳು ನೀಡುವ ದತ್ತಾಂಶ ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿರಬೇಕು. ಇದು ಭವಿಷ್ಯದ ಜೀವನ ಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಪೌಷ್ಟಿಕ ಆಹಾರ ಮತ್ತು ವಸತಿ ಸೌಕರ್ಯಗಳ ಒದಗಿಸಬೇಕು. ಜಿಲ್ಲೆಯ ಯಾವ ತಾಲೂಕುಗಳು ಅಥವಾ ಗ್ರಾಮ ಪಂಚಾಯತಿಗಳು ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕವಾಗಿ ಹಿಂದುಳಿದಿವೆ ಎಂಬುದನ್ನು ಗುರುತಿಸಿ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಈ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು ಈ ನಿಟ್ಟಿನಲ್ಲಿ ಅವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದರು.
ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆಯು ಮುಂದಿನ 5 ವರ್ಷಗಳ ಅಂದರೆ 2031ರ ಗಮನದಲ್ಲಿಟ್ಟುಕೊಂಡು, ಜಿಲ್ಲೆಯನ್ನು ಎಲ್ಲಾ ಹಂತಗಳಲ್ಲಿಯೂ ಮಾದರಿ ಜಿಲೆಯಾಗಿಸಲು ರೂಪಿಸುವ ದೂರದೃಷ್ಟಿ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಗೆ ತೊಂದರೆಯಾಗದಂತೆ ಪರಿಸರವನ್ನು ಉಳಿಸಿ ಬೆಳೆಸುವ ಮೂಲಕ ಹನಿ ನೀರಾವರಿ, ಅಂತರ್ಜಲ ವೃದ್ಧಿ, ಆಧುನಿಕ ಕೃಷಿ ಪದ್ಧತಿ ಮತ್ತು ರೈತರ ಆದಾಯ ದ್ವಿಗುಣಗೊಳಿಸಬೇಕು. ಸ್ಥಳೀಯ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಸ್ಥಳೀಯವಾಗಿ ಉದ್ಯೋಗಾವಕಾಶ ನೀಡಿ ವಲಸೆ ತಡೆಯಬೇಕು.
ನಗರ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಪ್ರತಿನಿತ್ಯ ಉಂಟಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ತ್ಯಾಜ್ಯ ಮುಕ್ತ ಜಿಲ್ಲೆಯಾಗಿಸಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ನೀಡುವ ವರದಿ ಅಥವಾ ಯೋಜನೆ ಕೇವಲ ಕಾಗದದ ಮೇಲೆ ಉಳಿಯಬಾರದು. ಅದಕ್ಕಾಗಿಯೇ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಹಂಪಿ ವಿವಿಯ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಹಾಗೂ ಸಮಾಜ ವಿಜ್ಞಾನ ನಿಕಾಯದ ಡೀನ್ ಹೆಚ್.ಡಿ.ಪ್ರಶಾಂತ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 