ಉಪಅರಣ್ಯ ಸಂರಕ್ಷಣಾಧಿಕಾರಿ ನಾಯ್ಕವಾಡಿ ಸಾವು
Deputy Conservator of Forest Naikwadi passed away
ಬೆಳಗಾವಿ 07: ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಯಬಾಗ ತಾಲೂಕಿನ ಬ್ಯಾಕೋಡ ಗ್ರಾಮದ ನಿವಾಸಿ ಶಿವಾನಂದ ನಾಯ್ಕವಾಡಿ(42) ಅವರು ಸೋಮವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿವಾನಂದ ನಾಯ್ಕವಾಡಿ ಅವರು ಕಳೆದ ಎರಡು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಡಿಎಫ್ಒ ಆಗಿ ವರ್ಗಾಯಿಸಲಾಗಿತ್ತು. ಆದರೆ ಇಂದು ಅವರು ನಿಧನ ಹೊಂದಿದ್ದಾರೆ. ಈ ಘಟನೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 