ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿ.ಪಂ. ಉಪಕಾರ್ಯದರ್ಶಿ ಭೇಟಿ

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿ.ಪಂ. ಉಪಕಾರ್ಯದರ್ಶಿ ಭೇಟಿ Deputy Secretary of G.P. visits the plastic waste management unit

ಲೋಕದರ್ಶನ ವರದಿ

ಬೆಳಗಾವಿ 09:   ಉಚಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜೂನ್ 9 (ಮಂಗಳವಾರ) ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಭೇಟಿ ನೀಡಿ ಪರೀಶೀಲನೆ ನಡೆಸಿದರು.  ಉಚಗಾಂವ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಘಟಕದ ಕಾರ್ಯವೈಖರಿಯನ್ನು ವೀಕ್ಷಿಸಿದರು. 

ಅಧಿಕಾರಿಗಳ ಸಮ್ಮುಖದಲ್ಲೇ ಘಟಕದ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಸಮಗ್ರ ಪರೀಶೀಲನೆ ನಡೆಸಲಾಯಿತು. ಇದೇ ವೇಳೆ, ತ್ಯಾಜ್ಯ ನಿರ್ವಹಣಾ ಘಟಕದ ಸುತ್ತಲೂ ಇರುವ ಸ್ಮಶಾನ ಪ್ರದೇಶವನ್ನು, ಅಲ್ಲಿನ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ವೀಕ್ಷಿಸಿದರು. ಅದೇ ರೀತಿಯಾಗಿ ಘಟಕದಲ್ಲಿ ಅಳವಡಿಸಲಾಗಿರುವ ವಿವಿಧ ಯಂತ್ರೋಪಕರಣಗಳ ಬಳಕೆ ಮತ್ತು ಅವುಗಳನ್ನು ದಿನನಿತ್ಯ ಯಾವ ರೀತಿಯಾಗಿ ಕಾರ್ಯಾಚರಣೆಗೆ ಒಳಪಡಿಸಲಾಗುತ್ತಿದೆ ಎಂಬುದರ ಕುರಿತು ಸ್ಥಳೀಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಜಿ.ಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಗ್ರಾಮೀಣ ಭಾಗದ ತ್ಯಾಜ್ಯವನ್ನು ಸಮರ​‍್ಕವಾಗಿ ಮರುಬಳಕೆ ಮಾಡಲು ಮತ್ತು ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.