ಬುದ್ಧ, ಬಸವಣ್ಣ, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಆರೋಪಿಯನ್ನು ಗಡಿಪಾರು ಮಾಡಲು ಆಗ್ರಹ
Derogatory remarks about Buddha, Basavanna, and Ambedkar: Demand to deport the accused
ಲೋಕದರ್ಶನ ವರದಿ
ಗದಗ, ಸೆ. 9: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣನವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ದೊಡ್ಡಯಾಚೇನಹಳ್ಳಿ ಗ್ರಾಮದ ವೇದಮೂರ್ತಿ ಎಂಬಾತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಎಸ್ಡಿಪಿಐ ಕರ್ನಾಟಕ ಹಾಗೂ ಗದಗ ಜಿಲ್ಲಾ ಎಸ್ಡಿಪಿಐ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಎಸ್ಡಿಪಿಐ ಗದಗ ಜಿಲ್ಲಾ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಹ್ಣ್ತಿಹಿ್ಘ್ಲ್ಕುು ಭೇದಭಾವ ತೊರೆದು ಎಲ್ಲರೂ ಒಗ್ಗಟ್ಟಾಗಿ ಬದುಕಬೇಕು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಇಂತಹ ಮಹನೀಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಆರೋಪಿಯ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಮಾಜದಲ್ಲಿ ಅಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ. ಆದ್ದರಿಂದ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದೇ ವೇಳೆ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಭೈರೇಗೌಡ ಅವರ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ತಮ್ಮ ಕುಟುಂಬ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದು, ಅವರ ಸೇವೆಯನ್ನು ಕಾಯಂಗೊಳಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ ಸಚಿವರು ಪೌರಕಾರ್ಮಿಕ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.
ಪೌರಕಾರ್ಮಿಕರಿಗೆ ಗುತ್ತಿಗೆದಾರರಿಂದ ನೀಡಲಾಗುತ್ತಿರುವ ಕನಿಷ್ಠ ವೇತನದಲ್ಲಿ ಪ್ರಸ್ತುತ ಬೆಲೆ ಏರಿಕೆಯ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಸಚಿವರ ಹೇಳಿಕೆಯನ್ನು ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿ, ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಬೇಕು. ಅಲ್ಲದೆ ಪೌರಕಾರ್ಮಿಕರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಕೆ. ಭೈರೇಗೌಡ ಅವರ ವಿರುದ್ಧ ಕ್ರಮ ಕೈಗೊಂಡು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಂ.ಬಿ. ನದಾಫ್, ಮಹಿಳಾ ಸಮಿತಿ ಸಂಚಾಲಕಿ ಪರವೀನ್ಬಾನು ಹವಾಲ್ದಾರ್, ಎಸ್ಡಿಪಿಐ ಮುಖಂಡರಾದ ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ್ ಬಳ್ಳಾರಿ, ಪುಷ್ಪಾ ವಿಜಯಪುರ, ಸಲೀಂ ಹರಿಹರ, ಖಾಜಾಸಾಬ್ ಇಸ್ಮಾಯಿಲ್, ಸಾಕ್ರುಬಾಯಿ ಗೋಸಾವಿ, ಮಕ್ತುಮಸಾಬ್ ಮುಲ್ಲಾ, ಅಫ್ರೋಜಾ ಗುಳಗುಂದಿ, ಗೌಸಸಾಬ್ ಅಕ್ಕಿ, ರವಿ ಗೋಸಾವಿ, ಮಾಲಾ ಗೋಸಾವಿ ಸೇರಿದಂತೆ ವಿವಿಧ ಎಸ್ಡಿಪಿಐ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 