ಅವಹೇಳನಕಾರಿ ಹೇಳಿಕೆ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು
Derogatory statement: Complaint against Prof. K.S. Bhagwan
ಲೋಕದರ್ಶನ ವರದಿ
ಮಹಾಲಿಂಗಪುರ 18: ಹಿಂದೂ ಧರ್ಮದ ಆರಾಧ್ಯ ದೈವ ಶ್ರೀರಾಮಚಂದ್ರ ಮತ್ತು ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯಕರ್ತರು ಗುರುವಾರದಂದು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಜೂನ್ 9, 2026ರಂದು ಹರಿಹರದ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮನ ಜನನ ಹಾಗೂ ಹಿಂದೂ ದೇವರುಗಳ ಕುರಿತು ಅಶ್ಲೀಲ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹೇಳಿಕೆಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ಉಂಟುಮಾಡಿವೆ. ಈ ಹಿಂದೆಯೂ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಭಗವಾನ್ ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಮಹಾಲಿಂಗಪುರ ಪೊಲೀಸ್ ಠಾಣಾಧಿಕಾರಿಯವರಿಗೆ ಒತ್ತಾಯಿಸಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತರಾದ ರಾಘವೇಂದ್ರ ಪವಾರ, ರಾಘು ಗರಗಟಗಿ, ಭರತ ಕದ್ದಿಮನಿ, ರಾಘು ಕಪರಟ್ಟಿ, ದಾನೇಶ ಡೊಂಬರ, ಸುದೀಪ ಮೇಟಿ, ವಿನೋದ ಮೇತ್ರಿ , ರಾಘು ಡಂಬಳ, ವಿಕ್ರಂ ಮೇಟಿ ಸೇರಿದಂತೆ ಇತರರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 