ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದೇಸಾಯಿ ಸೂಚನೆ
ಹಾವೇರಿ:ಎ. 03: ಕರೋನಾ ವೈರಸ್ ಹರಡದಂತೆ ಹೆಚ್ಚಿನ ಕಾಳಜಿ ವಹಿಸಿ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಹ ದೇಸಾಯಿ ಅವರು ಸೂಚಿಸಿದ್ದಾರೆ.
ಶುಕ್ರವಾರ ಹಾನಗಲ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್-19 ಕರೊನಾ ವೈರಸ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚಚರ್ಿಸಿದರು.
ಸಾಮಾನ್ಯ ಜನರಿಗೆ ದೈನಂದಿನ ಬದುಕಿಗೆ ಅವಶ್ಯವಿರುವ ಸಾಮಾಗ್ರಿಗಳ ಕೊರತೆಯಾಗದಂತೆ ಕ್ರಮವಹಿಸಬೇಕು. ಅನಗತ್ಯವಾಗಿ ಜನರು ಬೀದಿಯಲ್ಲಿ ಓಡಾಡುವುದನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಟಾಕನಗೌಡ ಪಾಟೀಲ, ತಾ.ಪಂ.ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ, ಅಕ್ಷರ ದಾಸೋಹ ಸಹಾಯಕ ನಿದರ್ೆಶಕ ಶೇಖರ ಹಂಚಿನಮನಿ ಇತರರು ಉಪಸ್ಥಿತರಿದ್ದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 