ಇಷ್ಟಲಿಂಗ ಒಂದೇ ಶಾಶ್ವತ : ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು
Desire is the only eternal one: Dr. Allama Prabhu Mahaswamy
ಇಷ್ಟಲಿಂಗ ಒಂದೇ ಶಾಶ್ವತ : ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು
ಬೆಳಗಾವಿ 03: ಕಷ್ಟವಿದ್ದಾಗ ಭಗವಂತನನ್ನು ಪ್ರಾರ್ಥಿಸಿ, ಸುಖ ಬಂದಾಗ ಅವನನ್ನು ಮರೆಯುವುದು ಲೋಕರೂಡಿ. ಆದರೆ ನಾವು ಗಳಿಸಿದ ಆಸ್ತಿ, ಸಂಪತ್ತು, ಹಣ, ಆಭರಣ ಇವು ಯಾವುದೂ ಶಾಶ್ವತವಲ್ಲ. ನಮ್ಮ ಜೀವಿತದ ಸಂದರ್ಭದಲ್ಲಿ ಹಾಗೂ ಜೀವನದ ನಂತರವೂ ನಮ್ಮೊಂದಿಗೆ ಬರುವುದು ಇಷ್ಟಲಿಂಗ ಮಾತ್ರ. ಅದೊಂದೇ ಶಾಶ್ವತ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಅವರು ಇಂದು ನಾಗನೂರು ರುದ್ರಾಕ್ಷಿ ಮಠದ ಪ್ರಭುದೇವ ಸಭಾಗೃಹ ದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆಯ ವತಿಯಿಂದ ಆಯೋಜಿಸಿದ್ದ ಮಾಸಿಕ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಶ್ರೀಗಳು ಭಕ್ತರು ಪೂಜೆಯನ್ನು ಕಾಯಕವನ್ನಾಗಿ ಮಾಡಿಕೊಳ್ಳದೇ ಕಾಯಕವನ್ನೇ ಪೂಜೆಯನ್ನಾಗಿ ಮಾಡಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಸಂಚಾರಿ ಗುರುಬಸವ ಬಳಗದ ಸಂಚಾಲಕ ಮಹಾಂತೇಶ ತೋರಣಗಟ್ಟಿ, ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಇಷ್ಟಲಿಂಗ ಪೂಜೆಯ ಪ್ರಾತ್ಯಕ್ಷಿಕೆ ತೋರಿಸಿಕೊಟ್ಟರು. ವೇದಿಕೆಯ ಮೇಲೆ ಸೊಲ್ಲಾಪುರದ ಶಿವಬಸವ ದೇವರು, ವಿಶ್ವನಾಥ ದೇವರು ಉಪಸ್ಥಿತರಿದ್ದರು. ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಕಾರ್ಯದರ್ಶಿ ಸಿ.ಎಂ. ಬೂದಿಹಾಳ ಸೇರಿದಂತೆ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯದ ವಿದ್ಯಾರ್ಥಿಗಳು, ನೂರಾರು ಶರಣ ಶರಣೆಯರು ಮಾಸಿಕ ಇಷ್ಟಲಿಂಗ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 