ಹೊಸ ಬಸ್ ನಿಲ್ದಾಣವಿದ್ದರೂ ಬಸ್‌ಗಳಿಲ್ಲ ಇನಾಂಹೊಂಗಲ ಪ್ರಯಾಣಿಕರ ಪರದಾಟ
Despite a new bus stand, there are no buses; Inamhongala commuters are stranded
ಸವದತ್ತಿ 08: ತಾಲೂಕಿನ ಇನಾಂಹೊಂಗಲ ಗ್ರಾಮದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣ ಇದೀಗ ಕೇವಲ ನಾಮಕಾವಸ್ಥೆಯಾಗಿದ್ದು, ಇಲ್ಲಿಗೆ ಬಸ್‌ಗಳು ಆಗಮಿಸದಿರುವುದು ಪ್ರಯಾಣಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.?ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ಅದ್ದೂರಿಯಾಗಿ ಉದ್ಘಾಟಿಸಿದ್ದ ಈ ಬಸ್ ನಿಲ್ದಾಣ ನಿರ್ಮಾಣಗೊಂಡು ಎರಡು ವರ್ಷಗಳು ಕಳೆದಿವೆ. ಆದರೂ, ಸಾರಿಗೆ ಬಸ್‌ಗಳು ನಿಲ್ದಾಣದ ಒಳಗೆ ಪ್ರವೇಶಿಸದೆ, ಮುಖ್ಯ ರಸ್ತೆಯ ಮೇಲೆಯೇ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿವೆ. ಇದರಿಂದ ಪ್ರಯಾಣಿಕರು, ವಿಶೇಷವಾಗಿ ಮಹಿಳೆಯರು, ವೃದ್ಧರು ಮತ್ತು ಶಾಲಾ ವಿದ್ಯಾರ್ಥಿಗಳು ಬಿಸಿಲು ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ಬಸ್ಸಿಗಾಗಿ ಕಾಯುವ ಅನಿವಾರ್ಯತೆ ಎದುರಾಗಿದೆ.
ಚಾಲಕರು ಬಸ್‌ಗಳನ್ನು ನಿಲ್ದಾಣದ ಒಳಗೆ ತರದೆ ರಸ್ತೆ ಬದಿಯಲ್ಲಿಯೇ ನಿಲ್ಲಿಸುತ್ತಿರುವುದರಿಂದ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳ ಭೀತಿಯೂ ಕಾಡುತ್ತಿದೆ. ಸರ್ಕಾರದ ಹಣ ಮತ್ತು ಶಾಸಕರ ಪ್ರಯತ್ನದಿಂದ ನಿರ್ಮಾಣವಾದ ಈ ಸೌಲಭ್ಯವು ಬಳಕೆಗೆ ಬಾರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯ ಮುಖಂಡ ಜಾವೇದ್ ದಂಡಿನ ಪ್ರತಿಕ್ರಿಯಿಸಿ, ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಚಾಲಕರು ಬಸ್‌ಗಳನ್ನು ಕಡ್ಡಾಯವಾಗಿ ನಿಲ್ದಾಣದ ಒಳಗೆ ಬಂದು ಹೋಗುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದರು. ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಮೂಲಕ ಪ್ರಯಾಣಿಕರ ಗೋಳನ್ನು ತಪ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 