ಮೊಲ ಬೇಟೆಯಾಡಿ ಟಿಕ್ ಟಾಕ್ ಮಾಡಿದವರ ಬಂಧನ
ತುಮಕೂರು. ಮೇ 2, ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಮಧುಗಿರಿ ತಾಲೂಕಿನ ಕರಿದುಗ್ಗನಹಳ್ಳಿ ಗ್ರಾಮದ ವಿನಯ್, ವಿನಯ್ ಕುಮಾರ್ ಬಂಧಿತ ಆರೋಪಿಗಳು.ಬಂಧಿತರು ಮೊಲ ಬೇಟೆಯಾಡಿ ನಂತರ ಮಾಂಸ ಕತ್ತರಿಸುವುದನ್ನು ಟಿಕ್ ಟಾಕ್ ಮಾಡಿ ಹರಿಬಿಟ್ಟಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರಿ ವೈರಲ್ ಆಗಿದ ಹಿನ್ನೆಲೆಯಲ್ಲಿ ತುಮಕೂರು ಉಪ ಅರಣ್ಯ ಸಂರಕ್ಷಾಣಾಧಿಕಾರಿ ಹೆಚ್.ಸಿ.ಗಿರೀಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 2(16), 9, 39, 50, 51 ಅಡಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 