ಗದಗ

ಸಿಗ್ಲಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಗಳು: ಗ್ರಾಮಸ್ಥರಿಂದ ಧರಣಿ

ಸಿಗ್ಲಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಗಳು: ಗ್ರಾಮಸ್ಥರಿಂದ ಧರಣಿ


ಲಕ್ಷ್ಮೇಶ್ವರ, 5: ತಾಲ್ಲೂಕಿನ ಶಿಕ್ಷಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸಿಗ್ಲಿ ಗ್ರಾಮದಲ್ಲಿ ಅಭಿವೃದ್ಧಿ ಕಾಣದೆ ಪ್ರಮುಖ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವುದನ್ನು ಖಂಡಿಸಿ ಗ್ರಾಮಸ್ಥರು ಧರಣಿ ಸತ್ಯಾಗ್ರಹ ನಡೆಸಿದರು.  

ಗ್ರಾಮದ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಧರಣಿ ನಡೆಸಿದ ಗ್ರಾಮಸ್ಥರು, ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಚರಂಡಿ, ಬೀದಿ ದೀಪ ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆಯಿಂದಲೂ ಗ್ರಾಮಸ್ಥರು ಪರದಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.  

ಧರಣಿಗೆ ಚಾಲನೆ ನೀಡಿ ಮಾತನಾಡಿದ ಹೂವಿನ ಶಿಗ್ಲಿಯ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು, ಸಿಗ್ಲಿ ಗ್ರಾಮವು ಹಲವು ಐತಿಹಾಸಿಕ ಮಹತ್ವ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಗ್ರಾಮದ ಹಿರಿಯ ಮುಖಂಡರು ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣಕ್ಕೂ ಗ್ರಾಮದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿದವರು ಇಲ್ಲಿದ್ದಾರೆ. ಇಂತಹ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದು ದುರದೃಷ್ಟಕರ ಎಂದರು.  


ಸುದ್ದಿ ಓದಿ