ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಪ್ರೊ. ಎಫ್.ಟಿ. ಹಳ್ಳಿಕೇರಿ
Devaraj Urs: A Champion of Social Justice – Prof. F.T. Hallikeri
ವಿಜಯನಗರ (ಹೊಸಪೇಟೆ) ಆ.20: ದೀನದಲಿತರು, ಹಿಂದುಳಿದ ವರ್ಗಗಳು ಹಾಗೂ ಗ್ರಾಮೀಣ ಜನರ ಸಮಸ್ಯೆಗಳನ್ನು ಹತ್ತಿರದಿಂದ ಕಂಡು, ಅವರ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸಿದ ದಿವಂಗತ ಡಿ. ದೇವರಾಜ ಅರಸು ಅವರು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸಾಮಾಜಿಕ ನ್ಯಾಯದ ಹರಿಕಾರರಾಗಿ ಗುರುತಿಸಿಕೊಂಡಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಫ್.ಟಿ. ಹಳ್ಳಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ದಿವಂಗತ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
1952ರಲ್ಲಿ ಹುಣಸೂರು ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿದ ಅವರು, 1972ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಮಹತ್ವದ ರಾಜಕೀಯ ಹಾಗೂ ಸಾಮಾಜಿಕ ಬದಲಾವಣೆಗಳಿಗೆ ನಾಂದಿ ಹಾಡಿದರು ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ವರ್ಗಗಳ ಧ್ವನಿಗೆ ಆಡಳಿತದಲ್ಲಿ ಹೊಸ ಶಕ್ತಿ ನೀಡಿದ ದೂರದೃಷ್ಟಿಯ ನಾಯಕರು. ಅವರ ಜನಪರ ಚಿಂತನೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳು ಇಂದಿಗೂ ನಮಗೆ ದಾರೀದೀಪವಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಜಿಲ್ಲೆಗೆ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ. ಶಶಿಕಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 