ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು
Devaraj Urs, the champion of social justice
ಲೋಕದರ್ಶನ ವರದಿ
ಹೂವಿನಹಡಗಲಿ ಆ.21- ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರುಶೋಷಿತರು,ತುಳಿತಕ್ಕೆ ಒಳಗಾದ ಶ್ರಮಿಕರು,ಹಿಂದುಳಿದವರ ಅಭಿವೃದ್ಧಿ ಗೆ ಯೋಜನೆ ಜಾರಿಗೆ ತಂದು, ಶ್ರಮ,ಸಂಸ್ಕೃತಿ ಹರಿಕಾರರಾಗಿದ್ದಾರೆ ಎಂದು ಪ್ರಾಚಾರ್ಯ ಎ.ಕೊಟ್ರಗೌಡ ಹೇಳಿದರು.
ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.
ಅರಸು ದೇಶಕ್ಕೆ ಮಾದರಿ ಆಡಳಿತ ನೀಡಿದ್ದರು. ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು. ಬಿಸಿಎಂ ವಿಸ್ತರಣಾಧಿಕಾರಿ ವಿ.ರಮೇಶ ಮಾತನಾಡಿ, ’ಅರಸು ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಕೇಂದ್ರೀಕರಿಸಿ ಕಲ್ಯಾಣ ಕಾರ್ಯಕ್ರಮ ರೂಪಿಸಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ’ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಜಿ.ಪರಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಜಿ.ಹನುಮಂತಪ್ಪ, ಸಹಾಯಕ ಕೃಷಿ ನಿರ್ದೇಶಕ ಕೆ.ಟಿ.ಮಂಜುನಾಥ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಪ್ರದೀಪಕುಮಾರ್, ಸಮಾಜ ಕಲ್ಯಾಣಾಧಿಕಾರಿ ಜ್ಯೋತಿ ಯಲಿವಾಳ, ಹೇಮಾದ್ರಿನಾಯ್ಕ, ಯಾಸೀನ್, ದೈಹಿಕ ಶಿಕ್ಷಣ ಪರೀವೀಕ್ಷಕ ರಫಿ ಅಹ್ಮದ್ ಖವಾಸ್, ಎಪಿಎಂಸಿ ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಸಿಡಿಪಿಒ ರೇಣುಕಾ ಉಪಸ್ಥಿತರಿದ್ದರು. ಶೈಕ್ಷಣಿಕ ಸಾಧನೆಗೈದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 