ದಿ.ಡಿ.ದೇವರಾಜ ಅರಸು ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆ ಅಪಾರ:ಮಿಥುನ್ ಪಾಟೀಲ
ರೋಣ 27: ರಾಜ್ಯದ ಬಡಜನರ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಹಾಕಿಕೊಂಡ ಕಾರ್ಯಕ್ರಮಗಳು ಇಂದಿಗೂ ಕೂಡ ಪ್ರಸ್ತುತವಾಗಿದೆ.ದಿ.ಡಿ.ದೇವರಾಜ ಅರಸು ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಪುರಸಭೆ ಉಪಾಧ್ಯಕ್ಷ ಮಿಥುನ್ ಪಾಟೀಲ ಹೇಳಿದರು.ಪಟ್ಟಣದ ಗುರು ಭವನದಲ್ಲಿ ತಾಲೂಕಾಡಳಿತ,ತಾಲೂಕು ಪಂಚಾಯತ,ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ದಿ.ಡಿ.ದೇವರಾಜ ಅರಸು ಅವರ 108 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಿ.ಡಿ.ದೇವರಾಜ ಅರಸು ಅವರು ರಾಜ್ಯಕಂಡ ಅತ್ಯಂತ ಧೀಮಂತ ನಾಯಕರಲ್ಲಿ ಒಬ್ಬರಾಗಿದ್ದು ಅವರ ಸಾಮಾಜಿಕ ಕ್ರಾಂತಿಯೇ ಹಿಂದುಳಿದವರು ನಿಶ್ಚಿಂತ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ.ನಾವು ಉತ್ತಮವಾದ ಶಿಕ್ಷಣ ಪಡೆದು ಸಾಮಾಜಕ್ಕೆ ಕೊಡುಗೆ ನೀಡಿದರೆ ಮಾತ್ರ ನಾವು ಕೂಡ ಅವರಂತೆ ದೊಡ್ಡ ನಾಯಕರಾಗಿ ಬೆಳೆಯುತ್ತೇವೆ ಎಂದು ಮಾತನಾಡಿದರು.ಪಟ್ಟಣದ ಸಿದ್ದಾರೂಢ ಮಠದಿಂದ ದಿ.ಡಿ.ದೇವರಾಜ ಅರಸು ಅವರ 108 ನೇ ಜನ್ಮ ದಿನದ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಗೆ ಶಾಸಕ ಜಿ.ಎಸ್.ಪಾಟೀಲ ಅವರು ಚಾಲನೆ ನೀಡಿದರು.ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಗೌರವಿಸಿ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ರವಿ ಎ.ಎನ್,ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ತಾಲೂಕು ಅಧಿಕಾರಿ ಡಾ.ಬಸವರಾಜ ಬಳ್ಳಾರಿ,ಉಪನ್ಯಾಸಕ ಪ್ರಭಾಕರ ಉಳ್ಳಾಗಡ್ಡಿ,ಸಿ.ಎಚ್.ಕಲಕೇರಿ,ಶಿವಪುತ್ರ್ಪ ಕುಮತಗಿ,ಡಿ.ಎಚ್.ವಸ್ತಾದ,ಎಮ್.ಎಸ್.ಗೋಡಿ,ಪ್ರಭು ಚಲವಾದಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು