ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ : ಬಿ.ಆರ್ ಪಾಟೀಲ್
Develop skills alongside education: B.R. Patil
ಲೋಕದರ್ಶನ ವರದಿ
ಬಾಗಲಕೋಟೆ 29: ವಿದ್ಯಾರ್ಥಿ ಜೀವನವು ಕೇವಲ ಪಾಠ ಕಲಿಯುವ ಅವಧಿಯಲ್ಲ; ಅದು ವ್ಯಕ್ತಿತ್ವವನ್ನು ರೂಪಿಸುವ ಅಮೂಲ್ಯ ಕಾಲ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೆ ಆಸ್ತಿಯಾಗಿ ಮಾಡಬೇಕು ಎಂದು ಬಸವೇಶ್ವರ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ.ಆರ್. ಪಾಟೀಲ್ ಹೇಳಿದರು.
ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲದಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡೆ, ಸಂಸ್ಕೃತಿಕ, ಏನ್. ಸಿ. ಸಿ, ಎನ್ ಎಸ್ ಎಸ್, ರೋವರ್ -ರೇಂಜರ್ ಚಟುವಟಿಕೆಗಳ ಸಮಾರಂಭವನ್ನು ಕಾಲೇಜಿನ ಸಮಿತಿಗಳ ಫಲಕವನ್ನು ಅನಾವರಣಗೊಳಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಪುಸ್ತಕದ ಓದು, ತರಗತಿಯ ಕಲಿಕೆ ಮಾತ್ರ ವಿದ್ಯಾರ್ಥಿಯನ್ನು ಪರಿಪೂರ್ಣರನ್ನಾಗಿ ಮಾಡಲಾರದು. ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕಷ್ಟೇ ಸೀಮಿತವಲ್ಲ. ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಣದ ನಿಜವಾದ ಗುರಿಯಾಗಿದೆ ಎಂದರು.
ಜೀವನದಲ್ಲಿ ಯಶಸ್ಸು ಸಾಧಿಸಲು ಬುದ್ಧಿವಂತಿಕೆ ಮಾತ್ರ ಸಾಲದು. ಉತ್ತಮ ಚಾರಿತ್ರ್ಯ, ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆ, ಪರಿಶ್ರಮ ಮತ್ತು ಮಾನವೀಯ ಮೌಲ್ಯಗಳು ಅತ್ಯಗತ್ಯ. ಈ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಕಾಲೇಜು ಜೀವನವೇ ಅತ್ಯುತ್ತಮ ಅವಕಾಶವಾಗಿದೆ.
ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿದ್ದು ಮೊಬೈಲ್, ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಜ್ಞಾನ ಮತ್ತು ಸೃಜನಶೀಲತೆಯ ಬೆಳವಣಿಗೆಗೆ ಬಳಸಿಕೊಳ್ಳಿ. ಸಮಯವನ್ನು ವ್ಯರ್ಥ ಮಾಡುವ ಚಟುವಟಿಕೆಗಳಿಂದ ದೂರವಿದ್ದು, ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಿ ಎಂದು ಹೇಳಿದರು.
ಪ್ರಾಚಾರ್ಯರಾದ ಎಸ್. ಆರ್. ಮುಗನೂರಮಠ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಇರುವಂತಹ ಅಂತಸತ್ವಗಳನ್ನು ಶಿಕ್ಷಣದ ಜೊತೆಗೆ ಹೊರಹಾಕಬೇಕು. ಪದವಿ ಪೂರ್ವ ಶಿಕ್ಷಣದಲ್ಲಿ ಸಿಗುವ ಸ್ವಾತಂತ್ರ್ಯ ಹಾಗೂ ಜವಾಬ್ದಾರಿಗಳು ನಿಮ್ಮ ಭವಿಷ್ಯದ ಭದ್ರ ಬುನಾದಿಯನ್ನು ಹಾಕಿಕೊಡುತ್ತವೆ ಎಂದರು.
ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್.ಎಂ.ಬೆಣ್ಣೂರ್, ಎನ್. ಎಸ್. ಎಸ್ ಘಟಕದ ಮುಖ್ಯಸ್ಥರಾದ ಆರ್. ಆರ್. ಅರಿಶಿನಗೂಡಿ, ಎನ್.ಸಿ.ಸಿ ಘಟಕದ ಮುಖ್ಯಸ್ಥರಾದ ಎಂ. ಎಂ. ದೇವನಾಳ, ಎಸ್. ಎಸ್. ಜೋರಾಪುರ್, ವಿದ್ಯಾರ್ಥಿ ಪ್ರತಿನಿಧಿಗಳಾದ ಸಿಂಚನಾ ರಾಠೋಡ, ಹನಮಂತಗೌಡ ಪಾಟೀಲ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 