ಅಭಿವೃದ್ಧಿ ಮಂಡಳಿ ವತಿಯಿಂದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
Development Board to hand over 42,345 houses
ಗದಗ 24: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ಸರಕಾರದ ವಸತಿ ಇಲಾಖೆಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ ಜರುಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಭಾಗಿಯಾಗಲಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೇರಿ ಸಚಿವ ಸಂಪುಟದ ಸಚಿವರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ,
ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಪಾಲ್ಗೊಳ್ಳುವರು.ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 