ಬೆಳಗಾವಿ

ದಾವಣಗೆರೆ ಪಂಚಮಸಾಲಿ ಮಹಿಳಾ ಘಟಕದಿಂದ ದೇವಿ ಆರಾಧನೆ ಹಾಗೂ ಲಲಿತಾ ಸಹಸ್ರನಾಮ ಪಾರಾಯಣ

ದಾವಣಗೆರೆ ಪಂಚಮಸಾಲಿ ಮಹಿಳಾ ಘಟಕದಿಂದ ದೇವಿ ಆರಾಧನೆ ಹಾಗೂ ಲಲಿತಾ ಸಹಸ್ರನಾಮ ಪಾರಾಯಣ



ದಾವಣಗೆರೆ 17: ನವರಾತ್ರಿ ಹಬ್ಬದ ಪವಿತ್ರ ಸಂದರ್ಭದಲ್ಲಿ ದಾವಣಗೆರೆ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ನಗರದ ಪಂಚಮಸಾಲಿ ಸಮಾಜದ ಕಚೇರಿಯಲ್ಲಿ ದೇವಿ ಆರಾಧನೆ ಹಾಗೂ ಲಲಿತಾ ಸಹಸ್ರನಾಮ ಪಾರಾಯಣ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿತ್ತು.ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಲಾದ ಕಾರ್ಯಕ್ರಮದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಲಲಿತಾ ಸಹಸ್ರನಾಮ ಪಾರಾಯಣ ನೆರವೇರಿಸಲಾಯಿತು.

ನವರಾತ್ರಿಯ ಧಾರ್ಮಿಕ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ದೇವಿಯ ಆರಾಧನೆ ಮಾಡಿದರು. ಪಂಚಮಸಾಲಿ ಸಮಾಜದ ಮಹಿಳೆಯರು ಹಾಗೂ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಮುತ್ತೈದೆಯರಿಗೆ ಸಂಪ್ರದಾಯದಂತೆ ಉಡಿ ತುಂಬಿ ಗೌರವಿಸಲಾಯಿತು.

ನವರಾತ್ರಿ ಹಬ್ಬದ ಸಂಭ್ರಮದೊಂದಿಗೆ ಧಾರ್ಮಿಕ ಆಚರಣೆಗಳನ್ನು ಮುಂದುವರಿಸುವುದು ಹಾಗೂ ಸಮಾಜದ ಮಹಿಳೆಯರಲ್ಲಿ ಭಕ್ತಿ, ಸಾಂಸ್ಕೃತಿಕ ಪರಂಪರೆ ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಭಕ್ತಿಪೂರ್ವಕ ವಾತಾವರಣದಲ್ಲಿ ನೆರವೇರಿತು. 


ಸುದ್ದಿ ಓದಿ