ಹಾವೇರಿ

ಕಾಗಿನೆಲೆಯಲ್ಲಿ ಶ್ರೀ ಕನಕದಾಸರ ಜಯಂತ್ಯೋತ್ಸವ ಹಾಗೂ ರಥೋತ್ಸವಕ್ಕೆ ಭಕ್ತಿಭಾವದ ಚಾಲನೆ

ಕಾಗಿನೆಲೆಯಲ್ಲಿ ಶ್ರೀ ಕನಕದಾಸರ ಜಯಂತ್ಯೋತ್ಸವ ಹಾಗೂ ರಥೋತ್ಸವಕ್ಕೆ ಭಕ್ತಿಭಾವದ ಚಾಲನೆ
Devotional commencement of Sri Kanaka Dasa Jayanti celebrations and the chariot festival in Kaginel


             ಹಾವೇರಿ  27: ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಜಿಲ್ಲೆಯ ಕಾಗಿನೆಲೆಯಲ್ಲಿ ಶ್ರೀ ಕನಕದಾಸರ ಜಯಂತ್ಯೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಎರಡು ದಿನಗಳ ಉತ್ಸವಕ್ಕೆ ಭಕ್ತಿಭಾವದ ವಾತಾವರಣದಲ್ಲಿ ವಿಧ್ಯುಕ್ತ ಚಾಲನೆ ನೀಡಲಾಯಿತು. 

                ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು. ಬಳಿಕ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.ನಂತರ ಹೊಳೆ ಪೂಜೆ ಹಾಗೂ ಶ್ರೀ ಕನಕದಾಸರ ರಥೋತ್ಸವದ ಕಳಸಾರೋಹಣ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. 

               ಈ ಸಂದರ್ಭದಲ್ಲಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ ಶ್ರೀ ಕ್ಷೇತ್ರ ಕಾಗಿನೆಲೆ ಭಕ್ತರ ಧಾರ್ಮಿಕ ಶ್ರದ್ಧೆ ಹಾಗೂ ಸಮುದಾಯದ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಕೇಂದ್ರವಾಗಿದೆ. ಶ್ರೀ ಕನಕದಾಸರ ಜಯಂತ್ಯೋತ್ಸವ ಮತ್ತು ರಥೋತ್ಸವವು ಅವರ ಆದರ್ಶ, ತತ್ವ ಹಾಗೂ ಭಕ್ತಿಪರಂಪರೆಯನ್ನು ಸ್ಮರಿಸುವ ಮಹತ್ವದ ಸಂದರ್ಭವಾಗಿದೆ ಎಂದರು. 

               ಈ ವೇಳೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಾಗರಾಜ ಆನ್ವೇರಿ, ಕುರುಬರ ಸಂಘದ ಉಪಾಧ್ಯಕ್ಷ ಅಶೋಕ ಬಣಕಾರ, ರಾಜೇಂದ್ರ ಹಾವೇರಣ್ಣನವರ, ಸಿದ್ದಣ್ಣ ಲಿಂಗಮ್ಮನವರ, ಸದಾನಂದಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು, ಮಠದ ಪದಾಕಾರಿಗಳು ಹಾಗೂ ಗಣ್ಯರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. 

                 ಕನಕದಾಸರ ಜಯಂತ್ಯೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಕಾಗಿನೆಲೆಯಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. 


ಸುದ್ದಿ ಓದಿ