ಪ್ರಸಿದ್ಧ ಗ್ರಾಮ ದೇವತೆ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ಶ್ರದ್ಧೆಯ ಧಾರ್ಮಿಕ ಕಾರ್ಯಕ್ರಮಗಳು
Devotional religious programs at the famous village deity Maremma Devi temple
ಲೋಕದರ್ಶನ ವರದಿ
ಕಂಪ್ಲಿ 17: ಗ್ರಾಮ ದೇವತೆ ಎಂಬ ಪ್ರಸಿದ್ಧಿ ಪಡೆದಿರುವ ಪಟ್ಟಣದ ಆರಾಧ್ಯ ದೇವತೆ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ಶಿವರಾತ್ರಿ ಅಮಾವಾಸ್ಯೆ ನಿಮಿತ್ಯ ಎಲೆಚೆಟ್ಟು, ಫುಷ್ಪಾಲಂಕಾರ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಮಂಗಳವಾರ ನೆರವೇರಿದವು.
ಪ್ರಾಚೀನ ಕಾಲದಿಂದಲೂ ತನ್ನದೇ ಇತಿಹಾಸ ಹೊಂದಿರುವ ಜೊತೆಗೆ ಪವಾಡ ದೇವತೆಯಾಗಿ ರೂಪುಗೊಂಡಿರುವ ಮಾರೆಮ್ಮ ದೇವಿಯ ದರ್ಶನವೂ ಅತ್ಯದ್ಬುತವಾಗಿದೆ.
ಆದ್ದರಿಂದ ಶಿವರಾತ್ರಿ ಜಾಗರಣೆಯ ಮರುದಿನದ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದ ದೇವಾಲಯದಲ್ಲಿ ದೇವಿಗೆ ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆ, ಪುನಸ್ಕಾರದ ಜೊತೆಗೆ ದೇವಿಗೆ ಫಲಪುಷ್ಪ ಮತ್ತು ಎಲೆಚೆಟ್ಟಿನ ಅಲಂಕಾರ ಮಾಡಲಾಗಿತ್ತು. ಸಾಕಷ್ಟು ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ದೇವಿಗೆ ದರ್ಶನ ಪಡೆಯುವ ಮೂಲಕ ಪುನೀತರಾದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 