ವಿಜಯಪುರ

ಕನ್ನಡ ಮಾಧ್ಯಮ, ಗ್ರಾಮೀಣ ಮಟ್ಟದಲ್ಲೂ ಉತ್ತಮ ಶಿಕ್ಷಣ ಪಡೆದರೆ ಉನ್ನತ ಹುದ್ದೆ ಸಾಧ್ಯ

ಕನ್ನಡ ಮಾಧ್ಯಮ, ಗ್ರಾಮೀಣ ಮಟ್ಟದಲ್ಲೂ ಉತ್ತಮ ಶಿಕ್ಷಣ ಪಡೆದರೆ ಉನ್ನತ ಹುದ್ದೆ ಸಾಧ್ಯ
Dhāravāḍa phuṭbāl cāmpiyanśipnalli vidyārthigaḷa sādhane

 ಕನ್ನಡ ಮಾಧ್ಯಮ, ಗ್ರಾಮೀಣ ಮಟ್ಟದಲ್ಲೂ ಉತ್ತಮ ಶಿಕ್ಷಣ ಪಡೆದರೆ ಉನ್ನತ ಹುದ್ದೆ ಸಾಧ್ಯ  

ಆಲಮೇಲ 12:    ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಮಟ್ಟದಲ್ಲಿ ಉತ್ತಮ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯವಿದೆ ಎಂದು ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮೀ ಕಲಶೆಟ್ಟಿ ಹೇಳಿದರು.  

ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಸಂಭ್ರಮ ಪರಿಚಯ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.  

ತಾವು ಕಲಿತ ಶಾಲೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಗೌರವ ಸನ್ಮಾನ ಸ್ವೀಕರಿಸಿ, ಮಕ್ಕಳೊಂದಿಗೆ ತಮ್ಮ ಸಾಧನೆಯ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ಕ್ಷಣವಾಗಿದೆ. ಮಕ್ಕಳು ಪ್ರಾಥಮಿಕ ಹಂತದಲ್ಲಿಯೇ ತಮ್ಮ ಗುರಿಯನ್ನು ನಿರ್ಧರಿಸಿಕೊಂಡು, ಶಿಕ್ಷಕರ ಮಾರ್ಗದರ್ಶನದಲ್ಲಿ ನಿರಂತರವಾಗಿ ಅಧ್ಯಯನ ಮಾಡಬೇಕು. ಆಗ ಮಾತ್ರ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ವಿಜಯಲಕ್ಷ್ಮೀ ಕಲಶೆಟ್ಟಿ ಹೇಳಿದರು.  

ಕಳೆದ ಫೆಬ್ರವರಿಯಲ್ಲಿ ಕೆಪಿಎಸ್ಸಿ ವತಿಯಿಂದ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೆಂಗಳೂರು ಸರ್ಕಾರದ ಸರಕು ಮತ್ತು ಸಾಗಾಣಿಕೆ ಇಲಾಖೆ ಹಾಗೂ ಆದಾಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆಗೆ ಸೇರಿದ ಶಾಲೆಯ ಹಳೆಯ ವಿದ್ಯಾರ್ಥಿನಿ ವಿಜಯಲಕ್ಷ್ಮೀ ಕಲಶೆಟ್ಟಿಯವರ ಸಾಧನೆಯನ್ನು ಗುರುತಿಸಿ, ಮಕ್ಕಳಿಗೆ ಪ್ರೇರಣೆ ದೊರೆಯಲಿ ಎಂಬ ಉದ್ದೇಶದಿಂದ ಅವರನ್ನು ಆಹ್ವಾನಿಸಿ ಸನ್ಮಾನಿಸಿ, ಸಾಧಕರನ್ನು ಮಕ್ಕಳಿಗೆ ಪರಿಚಯಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ ಹೇಳಿದರು.  

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರಣಹಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸರೂಬಾಯಿ ಬಂಡಗರ್, ಅಂಜಲಿ ಕನೊಳ್ಳಿ, ಐಶ್ವರ್ಯ ಬೇಪಾರಿ ಮುಂತಾದವರು ಉಪಸ್ಥಿತರಿದ್ದರು. 


ಸುದ್ದಿ ಓದಿ