ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಹಿಂದುಳಿದ ಹಾಗೂ ಗ್ರಾಮೀಣ ಮಹಿಳೆಯರ ಶಕ್ತಿಯಾಗಿದೆ
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಹಿಂದುಳಿದ ಹಾಗೂ ಗ್ರಾಮೀಣ ಮಹಿಳೆಯರ ಶಕ್ತಿಯಾಗಿದೆ
ಕಾಗವಾಡ 26: ಹಿಂದುಳಿದ ಹಾಗೂ ಗ್ರಾಮೀಣ ಭಾಗದ ಬಡ ಮಹಿಳೆಯರು ಆರ್ಥಿಕವಾಗಿ ಸದೃಢವಾಗಲು ಡಾ.ವೀರೇಂದ್ರ ಹೆಗಡೆ ಅವರ ನೇತೃತ್ವದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಶಕ್ತಿಯಾಗಿ ನಿಂತಿದೆ ಎಂದು ಮುಖಂಡ ಜ್ಯೋತಿಕುಮಾರ ಪಾಟೀಲ ಹೇಳಿದರು.
ಅವರು ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಮ್ಮಿಕೊಂಡ ತಾಲ್ಲೂಕು ಒಕ್ಕೂಟ ಪದಾಧಿಕಾರಿಗಳ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ರಾಜ್ಯದ ಕಡು ಬಡವ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ಸಾಗಿಸಲು ಬ್ಯಾಂಕ್ಗಳ ಮೂಲಕ ಸಾಲ ನೀಡಿ, ಆರ್ಥಿಕವಾಗಿ ಅವರನ್ನು ಸದೃಢರನ್ನಾಗಿ ಮಾಡುತ್ತಿದೆ. ಇದನ್ನು ಸಹಿಸದ ಕೆಲವರು ಸಂಸ್ಥೆಯ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇದಕ್ಕೆ ಯಾರು ಸಹ ಕಿವಿಗೊಡಬಾರದೆಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿದೇರ್ಶಕಿ ನಾಗರತ್ನಾ ಹೆಗಡೆ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಮೂಲಕ ಮಹಿಳಾ ಸಂಘಗಳಿಗೆ ಸಾಲ ನೀಡುತ್ತದೆ. ಡಾ.ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಸಂಸ್ಥೆ ಕೇವಲ ಮಧ್ಯದ ಸೇತುವೆ ತರಹ ಕೆಲಸ ಮಾಡುತ್ತದೆ. ಸಂಸ್ಥೆಯಲ್ಲಿ ರಾಜ್ಯದ ಸುಮಾರು 45 ಸಾವಿರ ಜನ ಉದ್ಯೋಗ ಮಾಡುತ್ತಿದ್ದರೇ 54 ಲಕ್ಷ ಪದಾಧಿಕಾರಿಗಳು ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ. ನೀವು ಸಂಘದಿಂದ ತುಂಬಿರುವ ಹಣ ಬ್ಯಾಂಕ್ ಖಾತೆಯಲ್ಲಿ ಇರುತ್ತದೆ. ಎಲ್ಲ ವ್ಯವಹಾರಗಳು ಬ್ಯಾಂಕ್ಗಳ ಮೂಲಕ ನಡೆಯುತ್ತವೆ. ಅತೀ ಕಡಿಮೆ ಬಡ್ಡಿ ದರದಲ್ಲಿ ಬಡ ಜನರಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇದನ್ನು ಸಹಿಸದ ಕೆಲವರು ಸುಳ್ಳು ಸಂಸ್ಥೆಯ ಹೆಸರು ಕೆಡಿಸುವ ಕಾರ್ಯ ಮಾಡುತ್ತಿದ್ದಾರೆ. ಅವುಗಳಿಗೆ ಕಿವಗೊಡಬಾರದು ಎಂದು ಹೇಳಿದರು.
ಈ ವೇಳೆ ಬ್ಯಾಂಕ್ ಆಫ್ ಮಹಾರಾಷ್ಟ್ರದ ಬೆಳಗಾವಿ ಶಾಖೆಯ ಪ್ರಧಾನ ವ್ಯವಸ್ಥಾಪಕ ಭಿಮಾಶಂಕರ, ನಿಂಗಪ್ಪ ಬಾಳಿಕಾಯಿ, ಸಂಜೀವ ಮರಾಠಿ ಸೇರಿದಂತೆ ನೂರಾರು ಮಹಿಳೆಯರು ಉಪಸ್ಥಿತರಿದ್ದರು.