ಇಂಡಿ

ಮೀಸಲಾತಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಮೀಸಲಾತಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಇಂಡಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಅ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬೆಂಬಲ ಸೂಚಿಸಿದರು. 

ಈ ಸಂದರ್ಭದಲ್ಲಿ ಶ್ರೀ ಗಳಿಗೆ ಸತ್ಕರಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದಲ್ಲಿಯೂ ಸಹ ಸಾಕಷ್ಟು ಜನ ಬಡವರಿದ್ದಾರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಯ ಅವಶ್ಯಕತೆ ಇದೆ. ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಒದಗಿಸಲೇಬೇಕು ಎಂದು ಆಗ್ರಹಿಸಿದರು. ಬೆಂಬಲ ಸೂಚಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಶ್ರೀಗಳು ಸತ್ಕರಿಸಿ ಆಶೀರ್ವದಿಸಿದರು. 

ಈ ಸಂದರ್ಭದಲ್ಲಿ ಪ್ರಭಾಕರ ಬದಲಿ, ರವಿಗೌಡ ಪಾಟೀಲ್, ನೀಲಕಂಠಗೌಡ ಪಾಟೀಲ್, ಅಯ್ಯನಗೌಡ ಬಿರಾದಾರ್, ಶಾಂತುಗೌಡ ಬಿರಾದಾರ್ ಸೇರಿದಂತೆ  ಅನೇಕರು ಇದ್ದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬೆಂಬಲ ಸೂಚಿಸಿದರು. 


ಸುದ್ದಿ ಓದಿ