ಎಲಬುರ್ಗ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯ ಶ್ಲಾಘನೀಯ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯ ಶ್ಲಾಘನೀಯ

ಯಲಬುರ್ಗಾ 28: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡವರ, ಧೀನ ದಲಿತ, ರೈತರ, ವಿದ್ಯಾರ್ಥಿಗಳ, ಮಹಿಳೆಯರಿಗಾಗಿ ಹತ್ತು ಹಲವಾರು ಜನಪರ ಯೋಜನೆಗಳನ್ನು ತರುವ ಮೂಲಕ ಅವರ ಜೀವನಕ್ಕೆ ಆಸರೆಯಾಗುತ್ತಿದ್ದು  ನಿಜಕ್ಕೂ ಇವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಕಲ್ಲಪ್ಪ ಕವಳಕೇರಿ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲೆಗಳಿಗೆ ಉಚಿತ ಡೆಸ್ಕ ವಿತರಿಸಿ ಅವರು ಮಾತನಾಡಿ,ಗ್ರಾಮಿಣಾ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಅನುಕೂಲಕ್ಕಾಗಿ ಉಚಿತ ಲ್ಯಾಪಟಾಪ್ ಜತೆ ಶಾಲೆಗಳಿಗೆ ಡೆಸ್ಕ ವಿತರಿಸುವ ಮೂಲಕ ನಮ್ಮ ಗ್ರಾಮಿಣಾ ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿ ದೀಪವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಒಂದು ಸರಕಾರ ಮಾಡುವ ಕೆಲಸಕ್ಕಿಂತ ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿದೆ. ಮಹಿಳೆಯರ, ಯುವ ಜನತೆಯ ಸ್ವಾವಲಂಬಿ ಜೀವನಕ್ಕಾಗಿ ಕೌಶಲ್ಯಾಭಿವೃದ್ದಿ ತರಬೇತಿ, ನಿರ್ಗತಿಕರಿಗೆ ಮಾಶಾಸನ, ಮಹಿಳೆಯರಿಗೆ ಸಾಲ ಸೌಲಭ್ಯ ನಿಡುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

ಸಂಸ್ಥೆಯ ಯೋಜನಾಧಿಕಾರಿ ರಾಜೇಶ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಸಮುದಾಯ ಅಭಿವೃದ್ದಿ ವಿಭಾಗದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆತವರು ಯಲಬುರ್ಗಾ ಮತ್ತು ಕೂಕನೂರು ತಾಲೂಕಿನ ಕೂಕನೂರು, ಗೋರ್ಲೆಕೊಪ್ಪ, ಮನ್ನಾಪೂರು, ಕಲ್ಲೂರು, ಹಿರೇಮ್ಯಾಗೇರಿ, ಬೆದವಟ್ಟಿ, ಹಗೇದಾಳ, ಗುನ್ನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ 5 ಲಕ್ಷದ 11 ಸಾವಿರ ರೂ,ಗಳ ವೆಚ್ಚದಲ್ಲಿ ಒಟ್ಟು 73 ಡೆಸ್ಕಗಳನ್ನು ವಿತರಿಸಲಾಗುತ್ತಿದೆ ಎಂದರು. ಕಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವರ್ಗ ಉಪಸ್ಥಿತರಿದ್ದರು.

ಸುದ್ದಿ ಓದಿ