ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಜನರಿಗೆ ಸೌಲಭ್ಯ
Dharmasthala Rural Development Project provides facilities to the people
ಹೂವಿನಹಡಗಲಿ 26: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಸಾಮೂಹಿಕ ಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕ ಕೃಷ್ಣ ನಾಯಕ್ ರವರು ಉದ್ಘಾಟಿಸಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಬಡ ಜನರಿಗೆ ಆರ್ಥಿಕ ಸೌಲಭ್ಯ ವನ್ನು ಕಲ್ಪಿಸಿಕೊಡಲಾಗಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಳ್ಳಿಗಳಲ್ಲಿ ಶುದ್ದಗಂಗಾ ಘಟಕಗಳ ನಿರ್ಮಾಣ, ಜ್ಞಾನದೀಪ ಶಿಕ್ಷಕರ ಕೊಡುಗೆ, ಸುಜ್ಞಾನ ನಿಧಿ ಶಿಷ್ಯವೇತನ, ಸಮುದಾಯ ಭವನ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನವನ್ನು ನೀಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿರು.
ಅಧ್ಯಕ್ಷತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಕೋಡಿಹಳ್ಳಿ ಕೊಟ್ರೇಶ್, ಸುಭಾಷ್, ಭರತೇಶ್ ಬಸ್ತಿಯವರು, ಶಿವರಾಜ್, ಶಂಭುನಾಥ್, ಗ್ರಾ.ಪಂ. ಉಪಾಧ್ಯಕ್ಷ ಕೊಟ್ಟೂರು ಅಂಗಡಿ ನಾಗಪ್ಪ , ಶಿವ ಚಿಂಪಿಗರ ಚಂದ್ರಶೇಖರ, ಉತ್ತಂಗಿ ಒಕ್ಕೂಟದ ಅಧ್ಯಕ್ಷೆ ಆರ್ ಎಂ ನಾಗರತ್ನ, ಯೋಜನಾಧಿಕಾರಿ ಸುಬ್ರಮಣ್ಯ, ಉತ್ತಂಗಿ ಮೇಲ್ವಿಚಾರಕ, ರಮೇಶ್, ಉತ್ತಂಗಿ ಮಂಜುನಾಥ್ ಹಾಗೂ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 