ಧರ್ಮಸ್ಥಳ ಪ್ರಕರಣ : ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ
Dharmasthala case: Demand for legal action against the culprits
ಧರ್ಮಸ್ಥಳ ಪ್ರಕರಣ : ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ
ಹೂವಿನಹಡಗಲಿ ಆ.1- ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅತ್ಯಾಚಾರ, ಅನಾಚಾರ, ಕೊಲೆ, ದಬ್ಬಾಳಿಕೆ ಪ್ರಕರಣಗಳನ್ನು ಯಾವ ಪ್ರಭಾವಕ್ಕೂ ಒಳಗಾಗದೇ ಪಾರದರ್ಶಕತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಎಐಟಿಯುಸಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಅಗ್ರಹಿಸಿದರು.ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಸಂಘದ ಪದಾಧಿಕಾರಿಗಳುನಡೆಸಿ, ಇತ್ತೀಚೆಗೆ ಪ್ರತಿಭಟನೆ ತಹಶೀಲ್ದಾರ್ ಜಿ. ಸಂತೋಷಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ಪಾರದರ್ಶ-ಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸಂಘಟನೆಯ ಬಸವರಾಜ ಸಂಶಿ, ಜಂಗ್ಲಿಸಾಬ್, ರೈತ ಸಂಘದ ಅಧ್ಯಕ್ಷ ಎಚ್. ಸಿದ್ದಪ್ಪ, ಕಾರ್ಯದರ್ಶಿ ಎಂ.ಶಿವರಾಜ್, ಮಲ್ಲಿಕಾರ್ಜುನ,ಬಸವರಾಜ. ಫಕ್ಕೀರ್ಪ. ಸುಭಾನ್.ಬಾಲಗಂಗಾಧರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 