ಧಾರವಾಡ ಜಿಲ್ಲಾ ನ್ಯಾಯಾಲಯ ಜುಲೈ 12 ರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ87,297 ಪ್ರಕರಣಗಳಲ್ಲಿ ರಾಜೀ ಸಂಧಾನ; ಮೊತ್ತ 62,18,70,599 ರೂ.ಗಳ ಇತ್ಯರ್ಥ
ಧಾರವಾಡ ಜಿಲ್ಲಾ ನ್ಯಾಯಾಲಯ ಜುಲೈ 12 ರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ87,297 ಪ್ರಕರಣಗಳಲ್ಲಿ ರಾಜೀ ಸಂಧಾನ; ಮೊತ್ತ 62,18,70,599 ರೂ.ಗಳ ಇತ್ಯರ್ಥ
ಧಾರವಾಡ 14: ಜುಲೈ 12, 2025 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 16,485 ಪ್ರಕರಣಗಳ ಪೈಕಿ 12,850 ಪ್ರಕರಣಗಳನ್ನು ಹಾಗೂ 76,920 ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ 74,447 ಪ್ರಕರಣಗಳನ್ನು ಸೇರಿ ಒಟ್ಟು 87,297 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ 8,30,95,609 ರೂಪಾಯಿಗಳು. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ ರೂ. 62,18,70,599 ರೂಪಾಯಿಗಳಾಗಿವೆ. ಧಾರವಾಡ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದ್ದ ವೈವಾಹಿಕ, ಜೀವನಾಂಶ ಪ್ರಕರಣಗಳಲ್ಲಿ ನಡೆದ ರಾಜೀ ಸಂಧಾನದ ಪರವಾಗಿ 21 ಪ್ರಕರಣಗಳು ಯಶಸ್ವಿಯಾಗಿ ದಂಪತಿಗಳು ಒಂದಾಗಿದ್ದಾರೆ. 59 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ರಾಜೀ ಪ್ರಕರಣದ ಮೂಲಕ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಧಾರವಾಡ ನಗರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಮುಖ್ಯ ನಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ 92 ವರ್ಷದ ಹಿರಿಯ ನಾಗರಿಕರು ತಮ್ಮ ಪಾಲು ವಿಭಾಗ ದಾವೆಯನ್ನು ರಾಜಿ ಮಾಡಿಕೊಂಡಿರುವುದು ವಿಶೇಷವಾಗಿದೆ. ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಎಸ್. ಭಾರತಿ ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ಮಾನ್ಯ ನ್ಯಾಯಾಧೀಶರಿಗೆ, ನ್ಯಾಯವಾದಿಗಳಿಗೆ, ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆ, ವಿಮಾ ಕಂಪನಿಗಳು ಅವುಗಳ ನ್ಯಾಯವಾದಿಗಳಿಗೆ, ಅಭಿಯೋಜನೆಯ ಅಧಿಕಾರಿಗಳಿಗೆ, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ಕಕ್ಷಿದಾರರಿಗೆ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರವಾಗಿ ಶುಭಾಶಯಗಳನ್ನು ಕೋರಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.