ಧಾರವಾಡ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಪದಾಧಿಕಾರಿಯಾಗಿ ಪ್ರೊ. ಶಾಂತಪ್ಪ ರಾಮಣ್ಣ ಕೆಂಚಣ್ಣ ಆಯ್ಕೆ
Dharwad District Pre-Graduate College Lecturers' Association office-bearer Prof. Shantappa Ramanna K
ಹುಬ್ಬಳ್ಳಿ 14 : ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಖ್ಯಾತ ಶಿಕ್ಷಣತಜ್ಞರು, ಮಾರ್ಗದರ್ಶಕರು ಹಾಗೂ ಶಿಕ್ಷಣ ಪ್ರೇಮಿಗಳಾದ ಪ್ರೊ. ಜಿ.ವಿ. ವಳಸಂಗ ಅವರ ಸಮ್ಮುಖದಲ್ಲಿ, ಧಾರವಾಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ 2026ಹಿ2031್ಫೂ ಅವಧಿಯ ಚುನಾವಣೆಯಲ್ಲಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪ್ರೊ. ಶಾಂತಪ್ಪ ರಾಮಣ್ಣ ಕೆಂಚಣ್ಣ ಅವರನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಪ್ರೊ. ಕೆಂಚಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಶಾಲು ಹೊದಿಸಿ, ಗ್ರಂಥ ನೀಡಿ ಹಾಗೂ ಮಾಲಾರೆ್ಣ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಶಿಕ್ಷಣ ಕ್ಷೇತ್ರದ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಸಂಘಟನಾ ಕೌಶಲ್ಯವನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣ್ಯರು, ತಮ್ಮ ಅವಧಿಯಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿವಿಧ ಸಮಸ್ಯೆಗಳ ಪರಿಹಾರ, ಗುಣಮಟ್ಟದ ಶಿಕ್ಷಣದ ವೃದ್ಧಿ ಹಾಗೂ ಉಪನ್ಯಾಸಕರ ಹಿತಾಸಕ್ತಿಗಳ ರಕ್ಷಣೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸೋಹನ್ ಸುರೇಶ್ ಹೊರಕೇರಿ, ಸುಜಯ್ ಸುರೇಶ್ ಹೊರಕೇರಿ, ಪ್ರೊ. ಜಿ.ವಿ. ವಳಸಂಗ, ಸೌಮ್ಯಾ ಕೆಂಚಣ್ಣ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷರು, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರು, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ, ಹನುಮಂತ ಟಿ., ಸುನೀತಾ ಮೇಟಿ, ಜ್ಯೋತಿ ಕೆಂಚಣ್ಣ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 