ಅ 10 ರಿಂದ 24 ರವರೆಗೆ ನವೀನ ಕಲಿಕಾ ಕಾರ್ಯಕ್ರಮ ಧ್ರುವ್
ಬೆಂಗಳೂರು, ಅ 10: ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ನಾವಿನ್ಯತಾ ಕಲಿಕಾ ಕಾರ್ಯಕ್ರಮ 'ಧ್ರುವ್' ಗೆ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಲ್ಲಿ ಗುರುವಾರ ಅ 10 ರಂದು ಚಾಲನೆ ಸಿಗಲಿದೆ. ಈ ಕಾರ್ಯಕ್ರಮ ದೆಹಲಿಯ ಐಐಟಿಯಲ್ಲಿ ಈ ತಿಂಗಳ 24 ರಂದು ಕೊನೆಗೊಳ್ಳಲಿದೆ. ವಿಜ್ಞಾನ, ಗಣಿತ ಮತ್ತು ಪ್ರದರ್ಶಕ ಕಲೆಗಳ ವಿಭಾಗದಿಂದ 60 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ದೇಶದ ಸಾಮಾಜಿಕ - ಆರ್ಥಿಕ, ರಾಜಕೀಯ ಮತ್ತು ಪರಿಸರ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲ ಸಾಮಥ್ರ್ಯವುಳ್ಳ ವಿದ್ಯಾರ್ಥಿಗಳ ಕಲ್ಪನಾ ಶಕ್ತಿ, ಕೌಶಲ್ಯ ಮತ್ತು ಜ್ಞಾನ ವೃದ್ಧಿ ಈ ಕಾರ್ಯಕ್ರಮದ ಉದ್ದೇಶವಾಗಿದೆ. ತರಬೇತಿ ನಂತರ ವಿದ್ಯಾರ್ಥಿಗಳು ಭಾರತವನ್ನು ಐದು ಲಕ್ಷ ಕೋಟಿ ಡಾಲರ್ ಆರ್ಥಿಕತೆಯ ರಾಷ್ಟ್ರವನ್ನಾಗಿಸುವ ಗುರಿ ಸಾಕಾರಕ್ಕೆ ಕೊಡುಗೆ ನೀಡಬಹುದಾಗಿ ಮತ್ತು ಹವಾಮಾನ ಬದಲಾವಣೆಗೆ ಪರಿಹಾರ ನೀಡಬಲ್ಲರಾಗಿರುತ್ತಾರೆ ಎಂದು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 