ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಧ್ಯಾನೇಶ್ವರ ನೇಮಕ
ಮುಂಡಗೋಡ:ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಧ್ಯಾನೇಶ್ವರ ಗುಡಿಯಾಳ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.
ಧ್ಯಾನೇಶ್ವರ ಗುಡಿಯಾಳ ಅವರು ತಕ್ಷಣ ಮುಂಡಗೋಡ ಬ್ಲಾಕ್ ಕಾಂಗ್ರೆಸ್ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಅವರು ಸೂಚಿಸಿದ್ದಾರೆ.