ಕಾರವಾರ

ಬಾಲಮಂದಿರ ಪ್ರೌಢಶಾಲೆಯಲ್ಲಿ ಶಿಶುವಿಹಾರ ಬಾಲವಿಹಾರ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ

ಬಾಲಮಂದಿರ ಪ್ರೌಢಶಾಲೆಯಲ್ಲಿ ಶಿಶುವಿಹಾರ ಬಾಲವಿಹಾರ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ

ಲೋಕದರ್ಶನ ವರದಿ 

ಕಾರವಾರ 06 : ಎಜ್ಯುಕೇಶನ್ ಸೊಸೈಟಿಯ ಪ್ರತಿಷ್ಠಿತ ಬಾಲಮಂದಿರ ಪ್ರೌಢಶಾಲೆಯಲ್ಲಿ ಶಿಶುವಿಹಾರ ಮತ್ತು ಬಾಲವಿಹಾರ ವಿದ್ಯಾರ್ಥಿಗಳ ಪಾಲಕರು ಹಾಗೂ ಪೋಷಕರೊಂದಿಗೆ ಸಂವಾದಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. 

ಕಾರ್ಯಕ್ರಮವು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ್ದ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿಗಳು ಹಾಗೂ ಹೆಚ್ಚುವರಿ ಕಾರ್ಯದರ್ಶಿಗಳಾದ ಜಿ. ಪಿ.ಕಾಮತಅವರು ಮಾತನಾಡಿ, “ಮಕ್ಕಳಲ್ಲಿ ಬಾಲ್ಯದಿಂದಲೇ ಶಿಸ್ತು, ಸಂಯಮ, ಮೌಲ್ಯಗಳು ಹಾಗೂ ಶಿಕ್ಷಣದ ಬಗ್ಗೆ ಸಕಾರಾತ್ಮಕ ಮನೋಭಾವ ಬೆಳೆಸುವುದು ಅತ್ಯಂತಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದ್ದು, ಮಕ್ಕಳ ಸವಾಂರ್ಗೀಣ ವ್ಯಕ್ತಿತ್ವ ವಿಕಸನಕ್ಕೆ ಕುಟುಂಬ ಮತ್ತು ಶಾಲೆಯ ಸಮನ್ವಯ ಅತ್ಯಗತ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು. 

ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಅಂಜಲಿ ಮಾನೆಅವರು 2026ಹಿ27ನೇ ಶೈಕ್ಷಣಿಕ ವರ್ಷದ ಶಾಲಾ ಕಾರ್ಯಚಟುವಟಿಕೆಗಳ ಕುರಿತು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪಾಲಿಸಬೇಕಾದ ಶಾಲಾ ನಿಯಮಗಳು, ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳು, ಅಕಾಡೆಮಿಕ್ ಅನುಷ್ಠಾನ, ಶಾಲೆಯ ವಿಶೇಷತೆಗಳು, ಮಕ್ಕಳ ಸುರಕ್ಷತಾ ಕ್ರಮಗಳು ಹಾಗೂ ಪಾಲಕರ ಸಹಭಾಗಿತ್ವದ ಮಹತ್ವದ ಕುರಿತು ವಿವರವಾಗಿ ತಿಳಿಸಿದರು. 

ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಅಧಿಕ ಪಾಲಕರು ಹಾಗೂ ಪೋಷಕರುತಮ್ಮ ಮಕ್ಕಳೊಂದಿಗೆ ಭಾಗವಹಿಸಿ, ಶಾಲೆಯ ಕಾರ್ಯವೈಖರಿ ಮತ್ತು ಶೈಕ್ಷಣಿಕ ಯೋಜನೆಗಳ ಕುರಿತು ಮಾಹಿತಿ ಪಡೆದು ಪ್ರಯೋಜನ ಪಡೆದರು. ಸಭೆಯಲ್ಲಿ ಶಿಶುವಿಹಾರ ಮತ್ತು ಬಾಲವಿಹಾರದ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಿಫಾಡಿ’ಕೊಸ್ಟಾಕಾರ್ಯಕ್ರಮವನ್ನು ನಿರೂಪಿಸಿದರು. 


ಸುದ್ದಿ ಓದಿ