ಕಾರವಾರ

ಜಿಲ್ಲೆಯಾದ್ಯಂತ 7,68,545 ಎನ್ಯುಮರೇಷನ್ ಫಾರ್ಮ್‌ ಗಣಕೀಕರಣ: ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ 7,68,545 ಎನ್ಯುಮರೇಷನ್ ಫಾರ್ಮ್‌ ಗಣಕೀಕರಣ: ಜಿಲ್ಲಾಧಿಕಾರಿ

 ಕಾರವಾರ 16 :- ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 7,68,545 ಫಾರ್ಮ್ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 14575 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 2994 ಶಾಶ್ವತ ವಲಸೆ ಹಾಗೂ 10264 ಮರಣ ಹೊಂದಿದ ಪ್ರಕರಣಗಳು, 1189 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ. 


ಸುದ್ದಿ ಓದಿ