ಸಮನ್ವಯತೆಯಿಂದ ಕೆಲಸ ಮಾಡಲು ಎಡಿಸಿ ಡಾ. ಓದ್ರಾಮ ಸೂಚನೆ

ಸಮನ್ವಯತೆಯಿಂದ ಕೆಲಸ ಮಾಡಲು ಎಡಿಸಿ ಡಾ. ಓದ್ರಾಮ ಸೂಚನೆ Digitization under survey of manuscripts

ಲೋಕದರ್ಶನ ವರದಿ 

ಹಸ್ತ ಪ್ರತಿಗಳ ಸಮೀಕ್ಷೆಯಡಿ ಡೀಜೀಟಲೀಕರಣ 

ವಿಜಯಪುರ  13:  ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಪುರಾತತ್ತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕದ ಪ್ರಾಚೀನ ಹಸ್ತ ಪ್ರತಿಗಳ ಸಮೀಕ್ಷೆಯಡಿ ಡೀಜೀಟಲೀಕರಣ ಮೇ -2026 ರ ತನಕ ನಡೆಯಲಿದ್ದು, ಸಮೀಕ್ಷೆಯ ಸಮರ​‍್ಕ ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಓದ್ರಾಮ, ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ ಡಿಜಿಟಲೀಕರಣ ಮಾಡುವ ಕೆಲಸ ನಡೆಯುತ್ತಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಶಾಶ್ವತವಾಗಿ ಉಳಿಸುವುದರ ಜೊತೆಗೆ ಸಾರ್ವಜನಿಕರಿಗೆ ಒಂದೇ ರಾಷ್ಟ್ರೀಯ ವೇದಿಕೆ ಮೂಲಕ ಪ್ರವೇಶ ಕಲ್ಪಿಸುವುದಾಗಿದೆ ಎಂದರು. 

ಈ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನ ಮತ್ತು ಮೊಬೈಲ್ ಪ್ರಕಟಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಅಪ್ಲಿಕೇಷನ್ ಮೂಲಕ ದೇಶದಾದ್ಯಂತ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಿ ರಾಷ್ಟ್ರೀಯ ಹಸ್ತಪ್ರತಿ ಭಂಡಾರದಲ್ಲಿ ಸಂಗ್ರಹಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಹಂಚಿಕೊಳ್ಳುವ ಯೋಜನೆ ರೂಪಿಸಲಾಗಿದೆ ಎಂದರು. ಈ ಯೋಜನೆಗೆ ಜಿಲ್ಲೆಯಲ್ಲಿ ಸಂಯೋಜಕರಾಗಿ ಕೃಷ್ಣಕೋಲಾರ ಕುಲಕರ್ಣಿ -9342018470, ಪಂಡಿತ ಪ್ರದ್ಯುಮ್ನಾಚಾರ್ಯ ಪೂಜಾರ -ಸದಸ್ಯರು -998630108, ಡಾ: ವೇದನಿಧಿ ಆಚಾರ್ಯ - ಸದಸ್ಯರು -9480312408, ಪಂಡಿತ ಸಂಜೀವಾಚಾರ್ಯ ಮದಭಾವಿ - ಸದಸ್ಯರು-9449183869 ಅವರಿಗೆ ಸಂಬಂಧಿಸಿದ ಅಧಿಕಾರಿಗಳು, ಗ್ರಂಥಾಲಯಗಳು, ದೇವಾಲಯಗಳು, ಮಠಗಳು, ಸೂಫಿ ಸಂತರು ಮಸೀದಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಮನೆಗಳಲ್ಲಿ ಖಾಸಗಿ ಸಂಗ್ರಹಗಳಲ್ಲಿ ಹಸ್ತಪ್ರತಿಗಳ ಗುರುತುಪಡಿಸುವಿಕೆ, ಸಂಗ್ರಹ ಸ್ಥಳಗಳಿಗೆ ಪ್ರವೇಶ ಕಲ್ಪಿಸಿ ಸಮೀಕ್ಷೆಗೆ ಸಹಕಾರ ಕಲ್ಪಿಅಬೇಕು ಎಂದರು. ದಾಖಲೀಕರಣ ಮತ್ತು ಪಟ್ಟಿ ಮಾಡುವಿಕೆ ಕಾರ್ಯಗಳಿಗೆ ಸಹಾಯ, ಸ್ಥಳೀಯ ಸಂಸ್ಥೆಗಳು ಹಾಗೂ ಸಂರಕ್ಷಕರಲ್ಲಿ ಜಾಗೃತಿ ಮೂಡಿಸುವಿಕೆ, ನಿಯಮಿತ ಪ್ರಗತಿ ವರದಿ ಸಲ್ಲಿಕೆಯಾಗಬೇಕು. ಈ ಅಮೂಲ್ಯ ಪ್ರಾಚೀನ ಹಸ್ತಪ್ರತಿಗಳ ಮಾಹಿತಿಯನ್ನು ಸಾರ್ವಜನಿಕರು ಒದಗಿಸಲು ಹಾಗೂ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು  ಸಾರ್ವಜನಿಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ಪಂ. ಡಾ.  ವೇದನಿಧಿ ಆಚಾರ್ಯ, ಪಂ. ಪುದ್ಯುಮ್ನಾಚಾರ್ಯ ಪೂಜಾರ,   ಪ್ರವಾಸಿ ಪ್ರಚಾರ ಅಧಿಕಾರಿ ಬಿ.ಎಚ್‌.ಕುಡಪಲಿ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ : 9886373006 ಸಂಪರ್ಕಿಸಬಹುದಾಗಿದೆ.