ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕಿಶಿ ಆಯ್ಕೆ ನಗರದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ
Dikishi's election as Congress Legislature Party leader sparks celebrations from supporters in the c
ಬಳ್ಳಾರಿ 31: ನಗರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಿದ್ದು. ಅವರು ಮುಖ್ಯ ಮಂತ್ರಿಯಾಗಿ ಜೂ.3 ರಂದು ಸಂಜೆ ಲೋಕಭವನದ ಗ್ಲಾಸ್ ಹೌಸ್ ನಲ್ಲಿ ಪ್ರಮಾಣವಚನಸ್ವೀಕರಿಸುವ ಹಿನ್ನಲೆಯಲ್ಲಿ ನಿನ್ನೆ ಸಂಜೆ ನಗರದಲ್ಲಿ ಮೇಯರ್ ಪಿ.ಗಾದೆಪ್ಪ ನೇತೃತ್ವದಲ್ಲಿ ಡಿಕಿಶಿ ಅಭಿಮಾನಿಗಳು ಸಂಭ್ರಮಿಸಿದರು.ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು ಮನೆ ಬಳಿಯಿಂದ ಬೈಕ್ ರ್ಯಾಲಿ ಕೈಗೊಂಡು ಗಡಗಿ ಚೆನ್ನಪ್ಪ ವೃತ್ತಕ್ಕೆ ಆಗಮಿಸಿ. ಕಾಂಗ್ರೆಸ್ ಪಕ್ಷದ ಬಾವುಟ, ಭಾವಚಿತ್ರದ ಫಲಕಗಳನ್ನು ಹಿಡಿದು ಪಟಾಕಿ ಸಿಡಿಸುತ್ತ ಡಿಕಿಶಿ ಪರ ಘೋಷಣೆ ಕೂಗಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ. ದುರ್ಗಮ್ಮಗುಡಿಗೆ ತೆರಳಿ ಪೂಜೆ ಸಲ್ಲಿಸಿ ಕೇಕ್ ಕತ್ತರಿಸಿ ಸಿಹಿ ಹಂಚಿದರು.ಬಳ್ಳಾರಿ ಗ್ರಾಮ ದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಮಾಡಲಾಯಿತು.ಈ ಸಂಧರ್ಭದಲ್ಲಿ ಕೆಪಿಸಿಸಿ ವಕ್ತಾರರ ವೆಂಕಟೇಶ್ ಹೆಗಡೆ, ಡಿಸಿಸಿ ಕಾರ್ಯಾಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ, ಉಪಾಧ್ಯಕ್ಷ ಕೆ. ಶ್ರೀನಿವಾಸಲು, ಪಾಲಿಗೆ ಸದಸ್ಯ ಕುಬೇರ, ಮುಖಂಡರಾದ ವೀರೇಂದ್ರ ಕುಮಾರ್, ವಿನಯ್ ಕುಮಾರ್ ರೆಡ್ಡಿ, ಶ್ರೀರಾಮರಾಜು, ಮುರಳಿ, ಕೌಶಿಕ್, ಭತ್ರಿ ಮಂಜು, ಚಲ್ಲಾ ರಮೇಶ್, ಚಲ್ಲಾ ವೆಂಕಟೇಶ್, ಲಕ್ಷ್ಮೀನಾರಾಯಣ, ಆನಂದ ಚೌದರಿ, ಜೆ. ಎರಿಸ್ವಾಮಿ, ಜೆ. ಪವನ್, ಕಾರ್ತಿಕ್, ವಿಜಯ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 