ನೇರ ಫೋನ್-ಇನ್ ಕಾರ್ಯಕ್ರಮ
Direct phone-in program
ಬೆಳಗಾವಿ 13: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿನಾಂಕ 14ನೆ ಫೆಬ್ರುವರಿ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ “ಮದ್ಯ ವ್ಯಸನಿ ಪಾಲಕರ ಮಕ್ಕಳ ಜಾಗೃತಿ ಸಪ್ತಾಹದ” ಅಂಗವಾಗಿ ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಪ್ರಾಚಾರ್ಯರಾದ ಡಾ. ಸುಹಾಸ ಕುಮಾರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 