ಬಳ್ಳಾರಿ

ಕಾಣೆಯಾದ ಮಕ್ಕಳ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಕಾಣೆಯಾದ ಮಕ್ಕಳ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಲೋಕದರ್ಶನ ವರದಿ 

ಬಳ್ಳಾರಿ, ಅ.1: ಜಿಲ್ಲೆಯಲ್ಲಿ ದಾಖಲಾಗಿರುವ ಕಾಣೆಯಾದ ಮಕ್ಕಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆಧುನಿಕ ತಂತ್ರಜ್ಞಾನದ ಸಮರ​‍್ಕ ಬಳಕೆಯ ಮೂಲಕ ಶೀಘ್ರವಾಗಿ ಪತ್ತೆಹಚ್ಚಬೇಕು. ಗುರುತು ಪತ್ತೆಯಾಗದ ಮೃತದೇಹಗಳ ಪ್ರಕರಣಗಳನ್ನೂ ಕಡ್ಡಾಯವಾಗಿ ಪರೀಶೀಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.  

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾಣೆಯಾದ ಮಕ್ಕಳ ಪತ್ತೆಹಚ್ಚುವಿಕೆಯ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಕಾಣೆಯಾದ ಮಕ್ಕಳ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ತನಿಖೆ ನಡೆಸಿ, ಶೀಘ್ರ ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಲ್ಲಿ ಪತ್ತೆಯಾಗುವ ಗುರುತು ಸಿಗದ ಮೃತದೇಹಗಳು ಮತ್ತು ಅಸ್ವಾಭಾವಿಕ ಸಾವುಗಳ ಪ್ರಕರಣಗಳನ್ನು ನಿಯಮಿತವಾಗಿ ಪರೀಶೀಲಿಸಬೇಕು. ಕಾಣೆಯಾದ ಮಕ್ಕಳ ವಿವರಗಳೊಂದಿಗೆ ಯುಡಿಆರ್ ದಾಖಲೆಗಳನ್ನು ಕ್ರಾಸ್‌-ವೆರಿಫೈ ಮಾಡಿ ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.  


ಸುದ್ದಿ ಓದಿ