ವಿಕಲಚೇತನ ವಿದ್ಯಾರ್ಥಿ ಎಂ.ವೀಣಾ ಶೇ.98 ಫಲಿತಾಂಶ
ಲೋಕದರ್ಶನ ವರದಿ
ಹೂವಿನಹಡಗಲಿ 30: ತಾಲೂಕಿನ ಇಟ್ಟಿಗಿ ಗ್ರಾಮದ ಶ್ರೀಮತಿ ಬಳಿಗಾರ ಪಾರ್ವತಮ್ಮ ಪ್ರೌಢಶಾಲೆಯಲ್ಲಿ ವಿಕಲಚೇತನ ವಿದ್ಯಾರ್ಥಿ ಎಂ ವೀಣಾ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.98 ರಷ್ಟು ಫಲಿತಾಂಶ ಮೂಲಕ ಸಾಧನೆ ಮಾಡಿದ್ದಾರೆ. 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ವಿಜಯನಗರ ಜಿಲ್ಲೆಗೆ ವಿಕಲಚೇತನರ ಕ್ಷೇತ್ರದಲ್ಲಿ ಎಂ.ವೀಣಾ ಪ್ರಥಮ ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಪ್ರತಿಭಾ ಪುರಸ್ಕಾರ : ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಸಾಧನೆ ಮಾಡಿದ ವಿದ್ಯಾರ್ಥಿ ಎಂ.ವೀಣಾ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು ನಂತರ ಮಾತನಾಡಿ ಜಿಲ್ಲಾಧಿಕಾರಿ,ಜಿಲ್ಲಾ ಉಸ್ತುವಾರಿ ಸಚಿವರ ಗಳ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮುಖ್ಯ ಗುರುಗಳಾದ ಕರೇಗೌಡ ,ಶಿಕ್ಷಕರು ವಿದ್ಯಾರ್ಥಿ ಯನ್ನು ಸನ್ಮಾನಿಸಲಾಯಿತು.ತಾಲೂಕಿನ ಎಂ.ಆರ್.ಡಬ್ಲ್ಯೂ ಮಂಜುನಾಥ ಮಾತನಾಡಿ ಇಲಾಖೆಯಿಂದ ಶೈಕ್ಷಣಿಕ ಸಾಧಕರಿಗೆ ಸಿಗುವ ಪ್ರೋತ್ಸಾಹ ಧನ, ಮುಂದಿನ ವಿದ್ಯಾಭ್ಯಾಸದ ಸಂದರ್ಭದಲ್ಲಿ ಶುಲ್ಕ ಮರುಪಾವತಿ, ಹಾಗೂ ವಿದ್ಯಾರ್ಥಿ ವೇತನದ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು. ಹಗರಿಬೊಮ್ಮನಹಳ್ಳಿ ತಾ.ಪಂ.ಯ ಎಂ.ಆರ್.ಡಬ್ಲ್ಯೂ ಎನ್ ಲಕ್ಷ್ಮಣ, ಇಟ್ಟಿಗಿ ಗ್ರಾ.ಪಂ. ವಿ.ಆರ್.ಡಬ್ಲ್ಯೂ ಎ ಜಯಪ್ಪ, ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷರಾದ ಎಸ್ ಚಂದ್ರ್ಪ ಗ್ರಾಮಸ್ಥರು,